ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 FEBRUARY 2021
ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದ ಗಣಿಗಳಲ್ಲಿ ಸಂಭವಿಸಿದ ಸ್ಪೋಟದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಅಕ್ರಮ ಗಣಿಗಾರಿಕೆಯಲ್ಲಿ ಶೇ.99ರಷ್ಟು ಮಂದಿ ಬಿಜೆಪಿಯವರಿದ್ದಾರೆ. ಇದೇ ಕಾರಣಕ್ಕೆ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ ಎಂದು ಆರೋಪಿಸಿದರು. ಚಿಕ್ಕಬಳ್ಳಾಪುರ ಮತ್ತು ಶಿವಮೊಗ್ಗದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
ನಂದಿತಾ ಕೇಸ್ ಸಿಬಿಐಗೆ ವಹಿಸಲಿ
ತೀರ್ಥಹಳ್ಳಿಯ ನಂದಿತಾ ಪ್ರಕರಣದಲ್ಲಿ ಅವರ ಮನೆಗೆ ಬಂದು ಕಾಫಿ ಕುಡಿದು ಹೋದ ಅಮಿತ್ ಷಾ ಅವರು ಗೃಹ ಸಚಿವರಾಗಿದ್ದಾರೆ. ಆರಗ ಜ್ಞಾನೇಂದ್ರ ಅವರು ಶಾಸಕರಾಗಿದ್ದಾರೆ. ಈಗೇನು ಬಾಯಲ್ಲಿ ಕಡುಬು ಇಟ್ಟುಕೊಂಡಿದ್ದಾರಾ. ಸಿಬಿಐ ತನಿಖೆ ನಡೆಸಲಿ ಎಂದು ಕಿಮ್ಮನೆ ರತ್ನಾಕರ್ ಸವಾಲು ಹಾಕಿದರು.
ಆರಗ ಜ್ಞಾನೇಂದ್ರ ಅವರು ಮೂರು ವರ್ಷ ವೈಕುಂಠ ಸಮಾರಾಧನೆಗಳಿಗೆ ಹೋಗಿದ್ದರು. ಗೆದ್ದು ಶಾಸಕರಾಗುತ್ತಿದ್ದಂತೆ ಆ ಕಡೆಗೆ ಹೋಗಿಲ್ಲ ಎಂದು ಆರೋಪಿಸಿದರು.
ಯಡಿಯೂರಪ್ಪ ಮನಸು ಮಾಡಿದರೆ
ಡಿಸಿಸಿ ಬ್ಯಾಂಕ್ ಅವ್ಯವಹಾರದ ಕುರಿತು ಸಿಬಿಐಗೆ ತನಿಖೆ ನಡೆಸಲಿ. ಯಡಿಯೂರಪ್ಪ ಅವರು ಮನಸು ಮಾಡಿದರೆ ಎರಡು ನಿಮಿಷದ ಕೆಲಸ. ಡಿಸಿಸಿ ಬ್ಯಾಂಕ್ನ ಅಧ್ಯಕ್ಷರು, ನಿರ್ದೆಶಕರು ಸಿಬಿಐ ತನಿಖೆಗೆ ಒಪ್ಪುತ್ತಿಲ್ಲ. ಯಾಕಂದರೆ 2003ರಿಂದ 2014ರವರೆಗೆ ನಿರ್ದೇಶಕರಾದ ಎಲ್ಲರು ತನಿಖೆಗೆ ಒಳಗಾಗಬೇಕಾಗುತ್ತದೆ ಎಂದರು.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ ಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್, ಪಾಲಿಕೆ ಸದಸ್ಯ ರಮೇಶ್ ಹೆಗಡೆ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422