ಭರ್ಜರಿ ಡಾನ್ಸ್‌, ಅಬ್ಬರದ ಘೋಷಣೆ, ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿತ್ತು ಬಿಜೆಪಿ ಸಂಭ್ರಮಾಚರಣೆ?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 5 JUNE 2024

RESULT NEWS : ಲೋಕಸಭೆ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕ್ಷೇತ್ರದಾದ್ಯಂತ ಸಂಭ್ರಮಾಚರಣೆ (Celebration) ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟರು.

ಎಲ್ಲೆಲ್ಲಿ ಹೇಗಿತ್ತು ಸಂಭ್ರಮ?

ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಎಸ್‌.ಎನ್.ಚನ್ನಬಸಪ್ಪ ಅವರನ್ನು ಭಜದ ಮೇಲೆ ಕೂರಿಸಿಕೊಂಡು ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಬಳಿಕ ಅಲಂಕೃತ ವಾಹನದಲ್ಲಿ ರಾಘವೇಂದ್ರ ಅವರ ಮೆರವಣಿಗೆ ಮಾಡಿದರು. ಇದೇ ವೇಳೆ ಡೊಳ್ಳಿನ ಶಬ್ದಕ್ಕೆ ಕಾರ್ಯಕರ್ತರು ಹೆಜ್ಜೆ ಹಾಕಿದರು.

ತಾಲೂಕುಗಳಲ್ಲಿ ಸಂಭ್ರಮಾಚಾರಣೆ

ಸಾಗರದ ಹೊಟೇಲ್ ಸರ್ಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಆನಂದಪುರದ ಮುಖ್ಯ ಬಸ್‌ ನಿಲ್ದಾಣದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಶಿರಾಳಕೊಪ್ಪ ಬಸ್‌ ನಿಲ್ದಾಣ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು. ಸೊರಬದ ‍ಶ್ರೀ ರಂಗನಾಥ ದೇವಸ್ಥಾನದ ಆವರಣದ ಮುಂಭಾಗ ಪಟಾಕಿ ಸಿಡಿಸಿ, ಸಿಹಿ ಹಂಚಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

BY Raghavendra Celebration

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೆ ಗೆದ್ದು 2 ದಾಖಲೆ ನಿರ್ಮಿಸಿದ ಬಿ.ವೈ.ರಾಘವೇಂದ್ರ, ಏನೇನದು?

ಹೊಳೆಹೊನ್ನೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಹೊಸನಗರದ ಖಾಸಗಿ ಬಸ್‌ ನಿಲ್ದಾಣದ ಮುಂದೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

BY Raghavendra Celebration

ಇದನ್ನೂ ಓದಿ – ‘ಹೋಗಿಬರಲಿ ಟಾಟಾ..!ʼ ಮಧು, ನಟ ಶಿವರಾಜ್‌ ಕುಮಾರ್‌, ಗೀತಾಗೆ ಫೇಸ್‌ಬುಕ್‌ನಲ್ಲಿ ಕುಮಾರ್‌ ಟಕ್ಕರ್‌

Leave a Comment