ಶಿವಮೊಗ್ಗದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 3 DECEMBER 2023

SHIMOGA : ರಾಜಸ್ಥಾನ, ಛತ್ತೀಸ್‌ಗಡ ಮತ್ತು ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಮುನ್ನಡೆ ಸಾಧಿಸಿದ ಹಿನ್ನೆಲೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಬಿಜೆಪಿ ಕಚೇರಿ ಮುಂಭಾಗ ಸಿಹಿ ಹಂಚಿ, ಘೋಷಣೆ ಕೂಗಿ ಸಂಭ್ರಮಿಸಿದರು.

ಯಾರೆಲ್ಲ ಏನೇನು ಹೇಳಿದರು?

ಕೆ.ಎಸ್.ಈಶ್ವರಪ್ಪ, ಮಾಜಿ ಶಾಸಕ : ಐದು ರಾಜ್ಯದಲ್ಲಿ ಗೆಲ್ಲಲಿದ್ದೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದರು. ತೆಲಂಗಾಣ ಹೊರತು ಉಳಿದೆಲ್ಲೆಡೆ ಸೋಲಾಗಿದೆ. ತೆಲಂಗಾಣದಲ್ಲಿ ಜಮೀರ್‌ ಅಹಮದ್‌ ಅವರು ಕರ್ನಾಟಕದಲ್ಲಿ ಮುಸ್ಲಿಂ ಒಬ್ಬರನ್ನ ಸ್ಪೀಕರ್‌ ಮಾಡಿದ್ದೇವೆ. 224 ಶಾಸಕರು ಅವರಿಗೆ ತಲೆ ತಗ್ಗಿಸಬೇಕಾಗಿದೆ ಎಂದು ಕೋಮು ಭಾವನೆ ಕೆರಳಿಸಿದರು. ಅಲ್ಲದೆ ಬಿಬಿಎಂಪಿಯಲ್ಲಿ ಸಂಗ್ರಹಿಸಿದ ಕಮಿಷನ್‌ ಹಣ ತೆಲಂಗಾಣಕ್ಕೆ ಹೋಗಿದೆ. ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರ ಶ್ರಮದ ಫಲವಾಗಿ ಗೆಲುವು ಸಾಧಿಸಿದ್ದೇವೆ. ಇದೆ ರೀತಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ. ಮೋದಿ ಪ್ರಧಾನಿಯಾಗಲಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಕ್ತಿ ಪೂಜೆ, ಹೊಸಮನೆಯಲ್ಲಿ ಗಮನ ಸೆಳೆಯುತ್ತಿದೆ ಶಬರಿಮಲೆ ದೇಗುಲ ಮಾದರಿ

ಎಸ್‌.ಎನ್.ಚನ್ನಬಸಪ್ಪ, ಶಾಸಕ : ಮಧ್ಯ ಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್‌ಗಡದ ರಾಜ್ಯದ ಪ್ರಜ್ಞಾವಂತ ಮತದಾರರು ಗ್ಯಾರಂಟಿಗಳಿಗೆ ಮಣಿಯದೆ, ಸಮರ್ಥ ನಾಯಕನ ಕೊರತೆ ಇರುವು, ಹಿಂದೂ ವಿರೋಧಿ ಕಾಂಗ್ರೆಸ್ಸನ್ನು ತಿರಸ್ಕರಿಸಿದ್ದಾರೆ. ಮೋದಿ ನಾಯಕತ್ವ ಮೆಚ್ಚಿ ಮತ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಮುಂದುವರೆಯಲಿದೆ.

ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಪ್ರಮುಖರಾದ ಗಿರೀಶ್‌ ಪಟೇಲ್‌ ಸೇರಿದಂತೆ ಹಲವರು ಇದ್ದರು.

Celebration In Shimoga BJP Office

Celebration In Shimoga BJP Office

Celebration In Shimoga BJP Office

Leave a Comment