SHIVAMOGGA LIVE NEWS | 27 MARCH 2024
SHIMOGA : ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಘೋಷಿಸಿರುವ ಅಭ್ಯರ್ಥಿ ಹೆಸರನ್ನು ಹಿಂಪಡೆಯಬೇಕು. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಒಂದು ವೇಳೆ ಅವರನ್ನೆ ಅಭ್ಯರ್ಥಿಯಾಗಿಸಿದರೆ ನಮ್ಮ ಮನಸ್ಥಿತಿಯಲ್ಲಿ ಚುನಾವಣಾ ಪ್ರಚಾರ ನಡೆಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಎಸ್.ಪಿ.ದಿನೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಪಿ.ದಿನೇಶ್, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿರುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ಬಂದಿಲ್ಲ. ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುವ ವೇಳೆ ಈ ವಿಚಾರ ತಿಳಿಸಿದ್ದಾರೆ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾಗ ಪ್ರಚಾರ ಕಾರ್ಯ ಶುರು ಮಾಡುವಂತೆ ತಿಳಿಸಿದ್ದರು. ಅವರ ಸೂಚನೆ ಮೇರೆಗೆ ಪ್ರಚಾರ ಆರಂಭಿಸಿದ್ದೆ ಎಂದರು.
ಪಕ್ಷವನ್ನು, ಮುಖಂಡರನ್ನು ಬೈದವರಿಗೆ ಟಿಕೆಟ್
ನಮ್ಮ ಪಕ್ಷದ ವಿರುದ್ಧ ವಿಧಾನಸಭೆ ಚುನಾವಣೆಗೆ ಜೆಡಿಎಸ್ನಿಂದ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿರುವ ವ್ಯಕ್ತಿಗೆ ಟಿಕೆಟ್ ಘೋಷಿಸಿರುವುದು ನೋವಿನ ಸಂಗತಿ. ನನ್ನ ಮತ ಈಶ್ವರಪ್ಪ ಅವರಿಗೆ ಎಂದು ಬಹಿರಂಗವಾಗಿ ಘೋಷಿಸಿದ ವ್ಯಕ್ತಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಿಸಿರುವು ಆಶ್ಚರ್ಯ. ಕಳೆದ ಚುನಾವಣೆಯಲ್ಲಿ ನನಗೆ ಮತ ಹಾಕಿದರೆ ಯಡಿಯೂರಪ್ಪಗೆ ಮತ ಹಾಕಿದಂತೆ. ಎಸ್.ಪಿ.ದಿನೇಶ್ಗೆ ಮತ ಹಾಕಿದರೆ ಸಿದ್ದರಾಮಯ್ಯಗೆ ಹಾಕಿದಂತೆ ಎಂದು ಪ್ರಚಾರ ಮಾಡಿದ್ದರು ಎಂದು ಆರೋಪಿಸಿದರು.
ಇದನ್ನೂ ಓದಿ – ಆಯನೂರು ಮಂಜುನಾಥ್ಗೆ ಒಲಿದ ಅದೃಷ್ಟ, ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ
ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕೆ ಮಾಡುತ್ತ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೆ ಬೈದಿದ್ದವರಿಗೆ ಟಿಕೆಟ್ ನೀಡಲಾಗಿದೆ. ಇವರ ಪರವಾಗಿ ನಾವು ಹೇಗೆ ಪ್ರಚಾರ ಮಾಡಬೇಕು. ಕಾಂಗ್ರೆಸ್ನ ಮತಗಳನ್ನು ಏಕೆ ಕೊಡಿಸಬೇಕು ಎಂದ ಎಸ್.ಪಿ.ದಿನೇಶ್ ಪ್ರಶ್ನಿಸಿದರು.
ಪದವೀಧರ ಕ್ಷೇತ್ರದ ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ರಂಗಸ್ವಾಮಿ, ವಿಶ್ವನಾಥ ಕಾಶಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಜರಿದ್ದರು.
ಇದನ್ನೂ ಓದಿ – ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟಿಸಿದ ಈಶ್ವರಪ್ಪ, ಇಡೀ ದಿನ ಎಲ್ಲೆಲ್ಲಿ ಪ್ರಚಾರ ನಡೆಸಿದರು? ಇಲ್ಲಿದೆ ಫಟಾಫಟ್ ಅಪ್ಡೇಟ್