ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 APRIL 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ELECTION NEWS : ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದರು. ತರಿಕೆರೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಅವರು ವಿಶೇಷ ವಿಮಾನದಲ್ಲಿ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲುವುದಾಗಿ ತಿಳಿಸಿದರು.
ಸಿದ್ದರಾಮಯ್ಯ ಏನೇನು ಹೇಳಿದರು? ಇಲ್ಲಿದೆ 5 ಪಾಯಿಂಟ್
ನೇಹಾ ಹಿರೇಮಠ ಕೊಲೆ ವಿಚಾರ : ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಒಡಿಗೆ ವಹಿಸಲಾಗುತ್ತದೆ. ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗುತ್ತದೆ. ನೇಹಾ ಹಿರೇಮಠ್ ಅವರ ಮನೆಗೆ ಸಚಿವರು, ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ.
ಬರ ಪರಿಹಾರ : ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಬರ ಪರಿಹಾರಕ್ಕಾಗಿ ವರದಿ ನೀಡಿದ್ದೇವೆ. ಒಂದು ತಿಂಗಳ ಒಳೆಗೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕಿತ್ತು. ಇದೆ ಕಾರಣಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೆವು. ರಾಜ್ಯ ಸರ್ಕಾರವೆ ರೈತರಿಗೆ 2 ಸಾವಿರ ರೂ. ಪರಿಹಾರ ಕೊಟ್ಟಿದೆ. ಕುಡಿಯುವ ನೀರಿಗೆ ತೊಂದರೆ ಆಗದ ಹಾಗೆ ನೋಡಿಕೊಳ್ಳುತ್ತಿದ್ದೇವೆ.
ಖಾಲಿ ಚೊಂಬು : ನಿಮ್ಮ ಕೈಗೆ ಏನು ಕೊಟ್ಟರು ಅಂದರೆ ಖಾಲಿ ಚೊಂಬು ಅಂತಾ ಹಳ್ಳಿ ಕಡೆ ಮಾತನಾಡುತ್ತಾರೆ. ಹಾಗೆ ಪ್ರಧಾನಿಯವರು ಕಪ್ಪು ಹಣ ತಂದು 15 ಲಕ್ಷ ರೂ. ಕೊಡುವುದಾಗಿ ಹೇಳಿದ್ದರು. ಉದ್ಯೋಗ ಕೊಡುವುದಾಗಿ ಹೇಳಿದ್ದರು. ಆದರೆ ಖಾಲಿ ಚೊಂಬು, ಚಿಪ್ಪು ಕೊಟ್ಟಿದ್ದಾರೆ. ಹಾಗಾಗಿ ಜಾಹೀರಾತು ಕೊಟ್ಟಿದ್ದೇವೆ. ನಾವು ಹೆಣ್ಣು ಮಕ್ಕಳಿಗೆ ಎರಡು ಸಾವಿರ ರೂ., ಬಸ್ಸಿನಲ್ಲಿ ಉಚಿತವಾಗಿ ಕರೆದೊಯ್ದಿದ್ದೇವೆ. ಇದಾವುದೂ ಡೇಂಜರ್ ಅಲ್ಲ. ಈ ದೇಶಕ್ಕೆ ಬಿಜೆಪಿಯೇ ಡೇಂಜರ್.
ಬಿಜೆಪಿಯವರು ಭ್ರಷ್ಟಾಚಾರ ಮಾಡಿಲ್ವಾ? : ಬಿಜೆಪಿ ಪಕ್ಷದಲ್ಲಿ ಯಾರೂ ಶ್ರೀಮಂತರಿಲ್ಲವೆ. ಅವರುಗಳ ಮೇಲೆ ಯಾಕೆ ಯಾವುದೆ ದಾಳಿ ನಡೆಯುವುದಿಲ್ಲ. ಯಡಿಯೂರಪ್ಪ, ವಿಜಯೇಂದ್ರ, ಅಶೋಕ್, ಶೋಭಾ ಕರಂದ್ಲಾಜೆ ಭ್ರಷ್ಟಾಚಾರ ಮಾಡಿಲ್ಲವೆ. ಅವರ ಮೇಲೆ ಯಾಕೆ ದಾಳಿ ನಡೆಸಿಲ್ಲ. ಯಾರೆಲ್ಲ ತೆರಿಗೆ ಪಾವತಿಸದೆ ಆಸ್ತಿ ಸಂಪಾದಿಸಿದ್ದಾರೊ ಅವರ ಮೇಲೆ ದಾಳಿ ನಡೆಸಬೇಕು.
ಯಡಿಯೂರಪ್ಪ ಶಾಸ್ತ್ರ : ಕಳೆದ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ಹೇಳಿದ್ದರು. ಈಗ ರಾಜ್ಯದಲ್ಲಿ 20 ಸ್ಥಾನ ಗೆಲ್ಲುತ್ತೇವೆ ಅನ್ನುತ್ತಿದ್ದಾರೆ. ಯಡಿಯೂರಪ್ಪ ಯಾವಾಗ ಶಾಸ್ತ್ರ ಹೇಳುವುದು ಕಲಿತರು. ಈ ಬಾರಿ ಶಿವಮೊಗ್ಗ ಸೇರಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಖಜಾನೆ ಖಾಲಿಯಾಗಿದೆ ಎಂದು ಹೇಳುವ ಕುಮಾರಸ್ವಾಮಿಗೆ ಬಜೆಟ್ ಗೊತ್ತಿದೆಯೆ.
ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ಎಂ.ಶ್ರೀಕಾಂತ್, ಮರಿಯಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಈಶ್ವರಪ್ಪಗೆ ಚಿಹ್ನೆ ನೀಡಿದ ಚುನಾವಣ ಆಯೋಗ, ಹೇಗಿದೆ?