ಶಿವಮೊಗ್ಗ ಲೈವ್.ಕಾಂ |SHIMOGA NEWS | 6 NOVEMBER 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನವೆಂಬರ್ 8ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಆ ದಿನ ಜಿಲ್ಲೆಯ ಅಭಿವೃದ್ಧಿ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಭಾನುವಾರ ಬೆಳಗ್ಗೆ 8.30ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಸಿಎಂ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಖಾಸಗಿ ನ್ಯೂಸ್ ಚಾನೆಲ್ ಒಂದರ ವರ್ಚುಯಲ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ಬಳಿಕ ಸ್ಥಳೀಯ ಕಾರ್ಯಕ್ರಮಗಳಲ್ಲಿ ಸಿಎಂ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಸರ್ಕ್ಯೂಟ್ ಹೌಸ್ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆ ನಡೆಸಲಿದ್ದಾರೆ. ಆ ಬಳಿಕ ಅಲ್ಲಿಯೇ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಸಂಜೆ 4 ಗಂಟೆಗೆ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್ನಿಂದ ಸಿಎಂ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]