ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020
ಶರಾವತಿ ಸಂತ್ರಸ್ತರ ಹಲವು ವರ್ಷದ ಸಮಸ್ಯೆಯನ್ನು ನ್ಯಾಯಯುತವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗ ಪ್ರವಾಸದ ಹಿನ್ನೆಲೆ ಬೆಳಗ್ಗೆ ಹೆಲಿಪ್ಯಾಡ್ಗೆ ಆಗಮಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಶರಾವತಿ ಸಂತ್ರಸ್ತರ ಬಹು ವರ್ಷದ ಸಮಸ್ಯೆ ಕುರಿತು ಮೊನ್ನೆ ಬೆಂಗಳೂರಿನಲ್ಲಿ ಸಭೆ ನಡೆಸಲಾಯಿತು. ಸಂಸದರು, ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ಕಾಲಮಿತಿಯೊಳಗೆ, ನ್ಯಾಯಯುತವಾಗಿ ಸಮಸ್ಯೆ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಠೇವಣಿ ಸಿಗದ ಕ್ಷೇತ್ರದಲ್ಲಿ 25 ಸಾವಿರ ಲೀಡ್
ಶಿರಾ ಮತ್ತು ಆರ್.ಆರ್.ನಗರ ಉಪ ಚುನಾವಣೆಯ ಮತದಾನೋತ್ತರ ಸಮೀಕ್ಷೆಯ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ, ಠೇವಣಿ ಉಳಿಸಿಕೊಳ್ಳುವುದೆ ಕಷ್ಟವಾಗಿರುವ ಶಿರಾ ಕ್ಷೇತ್ರದಲ್ಲಿ 25 ಸಾವಿರ ಅಂತರದಲ್ಲಿ ಗೆಲುವು ಸಾಧಿಸುತ್ತೇವೆ. ಆರ್.ಆರ್.ನಗರದಲ್ಲಿ 40 ಸಾವಿರ ಅಂತರದಲ್ಲಿ ಗೆಲ್ಲುತ್ತೇವೆ. ಚುನಾವಣೆಗೂ ಮೊದಲೆ ನಾನು ಇದ್ದನ್ನು ಹೇಳಿದ್ದೆ. ಮತದಾನೋತ್ತರ ಸಮೀಕ್ಷೆಗಳು ಅದನ್ನೇ ಹೇಳಿವೆ ಎಂದರು.
ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಹೆಚ್ಚು ಸ್ಥಾನ ಗೆಲ್ಲಲಿದ್ದಾರೆ ಎಂದು ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]