ರಾಮ ಮಂದಿರ ವಿಚಾರದಲ್ಲಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸಿಎಂ ಗರಂ, ಏನಂತ ಎಚ್ಚರಿಸಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2021

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ರಜತಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಯಾರೂ ಹಗುರವಾಗಿ ಮಾತನಾಡಬಾರದು ಎಂದು ಎಚ್ಚರಿಸಿದರು.

ಎಲ್ಲರೂ ದೇಣಿಗೆ ಕೊಡುತ್ತಿದ್ದಾರೆ

ರಾಮ ಮಂದಿರಕ್ಕಾಗಿ ಎಲ್ಲರೂ ದೇಣಿಗೆ ನೀಡುತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ದೇಣಿಗೆ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಮಂದಿರದ ವಿಚಾರದಲ್ಲಿ ಯಾರೂ ಹಗುರವಾಗಿ ಮಾತನಾಡಬಾರದು ಎಂದರು.

ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧ

ಇ‌ನ್ನು, ಅಯೋಧ್ಯೆ ಬಿಟ್ಟು ಬೇರೆಡೆ ಮಂದಿರ ಕಟ್ಟುವುದಾದರೆ ಹಣ ಕೊಡುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಇದು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾದ ಹೇಳಿಕೆ. ಈ ರೀತಿ ಮಾತನಾಡಿದರೆ ಸೂಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕಾಗುತ್ತದೆ. ವಿರೋಧ ಪಕ್ಷದ ನಾಯಕರು ಹಗುರವಾಗಿ ಮಾತಾಡುವುದು ಅವರಿಗೂ ಒಳ್ಳೆಯದಲ್ಲ, ರಾಜ್ಯಕ್ಕೂ ಒಳ್ಳೆಯದಲ್ಲ ಎಂದು ಯಡಿಯೂರಪ್ಪ ಎಚ್ಚರಿಸಿದರು.

ಇದೆ ವೇಳೆ ಮಾಚೇನಹಳ್ಳಿ ಕೈಗಾರಿಕಾ ವಸಾಹತು ವತಿಯಿಂದ ರಾಮ ಮಂದಿರ ನಿರ್ಮಾಣಕ್ಕೆ 70 ಲಕ್ಷ ರೂ. ಚೆಕನ್ನು ಸಿಎಂ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment