ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020
ತವರು ಜಿಲ್ಲೆ ಶಿವಮೊಗ್ಗಕ್ಕೆ ಆಗಮಿಸಿರುವ ಬಿ.ಎಸ್.ಯಡಿಯೂರಪ್ಪ ಅವರು ರಿಲಾಕ್ಸ್ ಮೂಡ್ಗೆ ಜಾರಿದ್ದಾರೆ. ಇವತ್ತು ತಮ್ಮೆಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಕುಟುಂಬದವರೊಂದಿಗೆ ಸಮಯ ಕಳೆಯುತ್ತಿದ್ದಾರೆ.
ಹೆಲಿಪ್ಯಾಡ್, ಐಬಿ, ಷೋ ರೂಂ
ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿದ ಯಡಿಯೂರಪ್ಪ ಅವರು, ಹೆಲಿಪ್ಯಾಡ್ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಬಳಿಕ ಐಬಿಯಲ್ಲಿ ರೋಟರಿ ಮತ್ತು ಖಾಸಗಿ ಸುದ್ದಿ ವಾಹಿನಿ ವತಿಯಿಂದ ಆಯೋಜಿಸಿದ್ದ ಆನ್ಲೈನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಂತರ ತಮ್ಮ ಪುತ್ರರಾದ ವಿಜಯೇಂದ್ರ ಮತ್ತು ರಾಘವೇಂದ್ರ ಅವರ ಮಾಲಿಕತ್ವದ ಕಿಯಾ ಕಾರು ಷೋ ರೂಂ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.
ಸಿಎಂ ಕಾರ್ಯಕ್ರಮಗಳೆಲ್ಲ ರದ್ದು
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಕುರಿತು ಪ್ರವಾಸಿ ಮಂದಿರದಲ್ಲಿ ಇವತ್ತು ಮಧ್ಯಾಹ್ನ ಅಧಿಕಾರಿಗಳ ಜೊತೆಗೆ ಸಿಎಂ ನಡೆಸಲು ಯೋಜಿಸಲಾಗಿತ್ತು. ಆ ಬಳಿಕ ಪತ್ರಿಕಾಗೋಷ್ಠಿ ನಿಗದಿಯಾಗಿತ್ತು. ಉಳಿದಂತೆ ಸ್ಥಳೀಯವಾಗಿ ಕೆಲವು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಾಲ್ಗೊಳ್ಳುವ ಸಾದ್ಯತೆ ಇತ್ತು. ಆದರೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಕುಟುಂಬದವರೊಂದಿಗೆ ಸಿಎಂ ರಿಲಾಕ್ಸ್
ಶಿವಮೊಗ್ಗದ ಬೈಪಾಸ್ ರಸ್ತೆಯ ಪಕ್ಕದ ನಂಜಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ಸಿಎಂ ರಿಲಾಕ್ಸ್ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರ ಕುಟುಂಬದವರೊಂದಿಗೆ ಸಮಯ ಕಳೆಯುತ್ತಿದ್ದಾರೆ. ಅಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರೊಬ್ಬರ ಭೇಟಿಗೂ ಅವಕಾಶವಿಲ್ಲ ಎಂದು ಹೇಳಲಾಗುತ್ತಿದೆ. ಮನೆ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422