ಶಿವಮೊಗ್ಗ ಲೈವ್.ಕಾಂ | 13 ಮಾರ್ಚ್ 2019
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಅಂತಾ ಭವಿಷ್ಯ ನುಡಿದಿದ್ದ, ಕೋಡಿ ಮಠದ ಸ್ವಾಮೀಜಿ ವಿರುದ್ಧ, ಶಿವಮೊಗ್ಗದಲ್ಲಿ ದೂರು ನೀಡಲಾಗಿದೆ. ಚುನಾವಣಾಧಿಕಾರಿ ಅವರನ್ನು ಭೇಟಿಯಾದ ಜಿಲ್ಲಾ ಕಾಂಗ್ರೆಸ್’ನ ಪ್ರಮುಖರು, ಕೋಡಿ ಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಅವರು ವಿರುದ್ಧ ದೂರು ನೀಡಿದ್ದಾರೆ.

ಮಾರ್ಚ್ 11ರಂದು, ರಾಯಚೂರಿನಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಯವರು, ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರು. ಮಾರ್ಚ್ 10ರಿಂದಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಹಾಗಿದ್ದೂ, ರಾಜಕೀಯ ಪ್ರೇರಿತ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಸ್ವಾಮೀಜಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸಿಗರು ಮನವಿ ಮಾಡಿದ್ದಾರೆ.
ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಪ್ರಮುಖರಾದ ವಿನೋದ್, ಮೊಹಮ್ಮದ್ ಅಕ್ಬರ್, ಕಿರಣ್, ಅರ್ಜುನ್, ಕವಿತಾ ಮತ್ತಿತರರು ಇದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
Congress leaders file a complaint against Kodi Mutt Swamji over his fortune, at Shivamogga. Recently Seer had predicted that Narendra Modi will be the Prime Minister again. This has irked Congress and other party leaders and a complaint has been filed at Shivamogga.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200