ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲೆಯಲ್ಲಿ ಕಳಪೆ ರಸ್ತೆಯಿಂದ ಆರಂಭವಾಗಿ ವಿಮಾನ ನಿಲ್ದಾಣ ಕಾಮಗಾರಿವರೆಗೂ ಕಮಿಷನ್ ದಂಧೆ ನಡೆಯುತ್ತಿದೆ. ಭ್ರಷ್ಟಾಚಾರ ಮಿತಿ ಮೀರುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್. ಸುಂದರೇಶ್, ಸರ್ಕಾರ ಹಾಗೂ ಜಿಲ್ಲಾಡಳಿತದ ಲೋಪಗಳ ವಿರುದ್ಧ ನಾವು ಎಷ್ಟೇ ಟೀಕೆ ಮಾಡಿದರೂ ಅದು ಸರಿಹೋಗುವ ಲಕ್ಷಣಗಳು ಕಾಣುತ್ತಿಲ್ಲ. ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಇದನ್ನು ನಿಯಂತ್ರಿಸುವವರೇ ಇಲ್ಲದಂತಾಗಿದೆ. ದಿನನಿತ್ಯ ಹೋರಾಟ ಮಾಡಿದರೂ ಪರಿಹಾರ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಯಾವ ಸಮಸ್ಯೆಗಳಿಗೂ ಸ್ಪಂದಿಸುತ್ತಿಲ್ಲ. ಆಸ್ತಿ ತೆರಿಗೆಯನ್ನು ಅವೈಜ್ಞಾನಿಕವಾಗಿ ಹೆಚ್ಚಿಸಲಾಗಿದೆ. 2019ರ ಅತಿವೃಷ್ಟಿಯಲ್ಲಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕೆ ಇನ್ನೂ ಹಣ ಮಂಜೂರಾಗಿಲ್ಲ ಎಂದು ದೂರಿದರು.
ಕರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಅಲ್ಲದೆ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿಯನ್ನೂ ತಪ್ಪಿಸಿಲ್ಲ. ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆಯಾಗಿದ್ದು ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಇವುಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಚಕಾರ ಎತ್ತುತ್ತಿಲ್ಲ ಎಂದು ಆಕ್ಷೇಪಿಸಿದರು.
ಯಾವುದೇ ಹೊಸ ಯೋಜನೆಗಳು ಬಂದರೂ ಕಿಕ್‌ಬ್ಯಾಕ್ ಸಿದ್ಧವಾಗಿಯೇ ಇರುತ್ತದೆ. ಶೇ.20ರಷ್ಟು ಗುಣಮಟ್ಟದ ಕೆಲಸವನ್ನು ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬೇಕಾಬಿಟ್ಟಿ ಕೆಲಸಗಳು ನಡೆಯುತ್ತಿವೆ ಎಂದು ಆರೋಪಿಸಿದರು.
ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಪಾಲಿಕೆ ಪ್ರತಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಎಚ್ .ಸಿ.ಯೋಗೇಶ್, ಮೇಹಕ್ ಷರೀಫ್, ಪ್ರಮುಖರಾದ ಸಿ.ಎಸ್. ಚಂದ್ರಭೂಪಾಲ, ವಿಶ್ವನಾಥ ಕಾಶಿ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200