ಶಿವಮೊಗ್ಗ ಲೈವ್.ಕಾಂ | SHIMOGA | 29 ಅಕ್ಟೋಬರ್ 2019
ರಾಜ್ಯ ಮತ್ತು ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ನ.5ರಂದು ಶಿವಮೊಗ್ಗದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಚೈತನ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಗ್ರಾಪಂ, ತಾಪಂ, ಜಿಪಂ, ನಗರಸಭೆ, ನಗರಪಾಲಿಕೆ ಸದಸ್ಯರು ಮತ್ತು ಸೋತವರು ಮನೆ ಮನೆಗೆ ತೆರಳಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ ಎಂದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮಲ್ಲಿಕಾರ್ಜುನ ಖರ್ಗೆ, ಈಶ್ವರ್ ಖಂಡ್ರೆ, ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್, ಎಸ್.ಆರ್.ಪಾಟೀಲ್, ಜಮೀರ್ ಅಹಮ್ಮದ್ ಸೇರಿ ಹಲವು ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದ ನಾಯಕರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ನೆರೆ ಪರಿಹಾರ ವಿತರಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. 10 ಸಾವಿರ ರೂ. ಪರಿಹಾರ ಬಿಟ್ಟರೆ ಶಾಶ್ವತ ಪರಿಹಾರಕ್ಕೆ ಯಾವುದೆ ಕ್ರಮ ಕೈಗೊಂಡಿಲ್ಲ. ಸಿಎಂ ಸೇರಿ ಸಚಿವರು ಪ್ರವಾಸ ಕೈಗೊಂಡು ಸಂತ್ರಸ್ತರಿಗೆ ಸಹಾಯ ಮಾಡದೆ ಕೇವಲ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಎಂಎಲ್ಸಿ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕರಾದ ಎಚ್.ಎಂ. ಚಂದ್ರಶೇಖರಪ್ಪ, ಕೆ.ಬಿ.ಪ್ರಸನ್ನಕುಮಾರ್, ಮುಖಂಡರಾದ ಕಲಗೋಡು ರತ್ನಾಕರ್, ರವಿಕುಮಾರ್, ವಿಶ್ವನಾಥ ಕಾಶಿ, ಇಕ್ಬಾಲ್ ಖಾನ್, ನಾಗರಾಜ್ ಸುದ್ದಿಗೋಷ್ಠಿಯಲ್ಲಿ ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]