ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 FEBRUARY 2024
SHIMOGA : ಮಂಗಳೂರಿನಲ್ಲಿ ಫೆ.17ರಂದು ರಾಜ್ಯಮಟ್ಟದ ಬೂತ್ ಅಧ್ಯಕ್ಷರು, ಪದಾಧಿಕಾರಿಗಳ ಸಮಾವೇಶ ಆಯೋಜಿಸಲಾಗಿದೆ. ಜಿಲ್ಲೆಯಿಂದ 8 ಸಾವಿರ ಮಂದಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಸ್ತುವಾರಿ ವೇಣುಗೋಪಾಲ್, ರಣದೀಪ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿದೆಯೆ ಎಂದು ಖಚಿತಪಡಿಸಿಕೊಳ್ಳುವ ಕುರಿತು ತಿಳಿವಳಿಕೆ ಮೂಡಿಸಲಾಗುತ್ತದೆ ಎಂದರು.
ಫೆ.24ರಂದು ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ ಆಯೋಜಿಸಲಾಗಿದೆ. ಯೋಜನೆಗಳಿಂದ ವಂಚಿತರಾದವರನ್ನು ಸ್ಥಳದಲ್ಲೆ ನೋಂದಣಿ ಮಾಡಲಾಗುತ್ತದೆ ಎಂದು ತಿಳಿಸಿದರು.
ಬಿಜೆಪಿ ದುರಾಡಳಿತದಿಂದ ಜನ ಹಸಿವಿಂದ ತತ್ತರಿಸಿದ್ದಾರೆ. ಜನಕ್ಕೆ ಆರ್ಥಿಕ ನೆರವು ನೀಡಲು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಘೋಷಿಸಿದೆ. ಆದರೆ ಗ್ಯಾರಂಟಿ ಯೋಜನೆಯ ಕುರಿತು ಬಿಜೆಪಿ ಮುಖಂಡರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಚಂದ್ರಭೂಪಾಲ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಮಹಿಳಾ ಆಫೀಸರ್ಗೆ ವಾಟ್ಸಪ್ ಕಾಲ್, ರಿಸೀವ್ ಮಾಡ್ತಿದ್ದಂತೆ ಕಾದಿತ್ತು ಶಾಕ್, ಫೋನ್ ಮಾಡಿದ್ರಾ ಲೋಕಾಯುಕ್ತ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422