ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 7 AUGUST 2024 : ಕಳೆದ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಸೋಲಿಗೆ ಕಾರಣ ತಿಳಿಯಲು ಸತ್ಯಶೋಧನಾ ಸಮಿತಿ (Committee) ಜಿಲ್ಲೆಗೆ ಆಗಮಿಸಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತಿದೆ.
ಸತ್ಯ ಶೋಧನಾ ಸಭೆ ಆರಂಭ
ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಸತ್ಯ ಶೋಧನಾ ಸಭೆ ನಡೆಸಲಾಗುತ್ತಿದೆ. ಮೊದಲಿಗೆ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ, ಮಾಜಿ ಸಚಿವ ಹೆಚ್.ಆಂಜನೇಯ ಸಭೆಯ ಉದ್ದೇಶ ತಿಳಿಸಿದರು.
ವಿ.ಎಸ್.ಉಗ್ರಪ್ಪ ಏನಂದ್ರು?
ವೈಚಾರಿಕ ಯೋಚನೆಯುಳ್ಳ ಜಿಲ್ಲೆ ಶಿವಮೊಗ್ಗ. ಇಲ್ಲಿ ಮತೀಯವಾದಿಗಳು ವಿಜೃಂಭಿಸುತ್ತಿರುವುದು ನೋವಿನ ಸಂಗತಿ. ಲೋಕಸಭೆ ಚುನಾವಣೆಯಲ್ಲಿ ಬಹುತೇಕ ಸ್ಥಾನ ಗೆಲ್ಲುವ ಅನಿಸಿಕೆ ಇತ್ತು. ಆದರೆ ಹಿನ್ನೆಡೆಯಾಗಿದೆ. ಅದಕ್ಕೆ ಕಾರಣ ತಿಳಿಯಲು ಸಮಿತಿ ರಚಿಸಲಾಗಿದೆ.
ಹೆಚ್.ಆಂಜನೇಯ ಹೇಳಿದ್ದೇನು?
ಗ್ಯಾರಂಟಿಗಳನ್ನು ಘೋಷಿಸಿ ಅನುಷ್ಠಾನಕ್ಕೆ ತಂದು ನುಡಿದಂತೆ ನಡೆಸಿದ್ದೇವೆ. ಬಲಿಷ್ಠ ನಾಯಕತ್ವವು ಇದೆ. ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗಕ್ಕೆ ಪ್ರಬಲ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೂ ಸೋಲಾಗಿದೆ. ಗ್ಯಾರಂಟಿ ಫಲಾನುಭವಿಗಳನ್ನು ಮತದಾರರನ್ನಾಗಿ ಪರಿವರ್ತಿಸಲು ವಿಫಲವಾದೆವಾ? ಆಂತರಿಕ ಭಿನ್ನಾಭಿಪ್ರಯಕ್ಕೆ ಸೋಲಾಯಿತಾ ತಿಳಿಯಲು ಬಂದಿದ್ದೇವೆ. ಹೈಕಮಾಂಡ್ಗೆ ವರದಿ ಸಲ್ಲಿಸುತ್ತೇವೆ.
ಇಡೀ ದಿನ ಅಭಿಪ್ರಾಯ ಸಂಗ್ರಹ
ಸತ್ಯಶೋಧನಾ ಸಮಿತಿಯು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಿದೆ. ವಿಧಾನಸಭೆ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳು, ಮಾಜಿ ಸಂಸದರು, ಶಾಸಕರು, ವಿವಿಧ ಘಟಕಗಳ ಮುಖಂಡರು, ಕೆಪಿಸಿಸಿ ಪದಾಧಿಕಾರಿಗಳು ಮತ್ತು ಹಿರಿಯ ಮುಖಂಡರು, ಜಿಲ್ಲಾ, ತಾಲೂಕು ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಸದಸ್ಯರು, ಮಾಜಿ ಸದಸ್ಯರು, ಕಾರ್ಯಕರ್ತರ ಅಭಿಪ್ರಾಯವನ್ನು ಹಂತ ಹಂತವಾಗಿ ಪಡೆಯಲಾಗುತ್ತಿದೆ. ಸಮಿತಿ ಸದಸ್ಯರು ಒಬ್ಬೊಬ್ಬರನ್ನೆ ಕರೆಯಿಸಿ ಅಭಿಪ್ರಾಯ ಪಡೆದು ಅದನ್ನು ಹೈಕಮಾಂಡ್ಗೆ ಸಲ್ಲಿಸಲಿದೆ.
ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ವಿಧಾನ ಪರಿಷತ್ ಸದಸ್ಯ ಬಲ್ಕಿಷ್ ಬಾನು, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ ⇓
ದೆಹಲಿಯಲ್ಲಿ ವಿಐಎಸ್ಎಲ್ ಕಾರ್ಮಿಕರು, ಸಂಸದ ರಾಘವೇಂದ್ರ ಜೊತೆ ಕೇಂದ್ರ ಸಚಿವರ ಭೇಟಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422