SHIVAMOGGA LIVE NEWS | CONGRESS | 10 ಮೇ 2022
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ಖಂಡಿಸಿ ಇವತ್ತು ಶಿವಮೊಗ್ಗ ನಗರದಲ್ಲಿ ಜನ ದನಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿ ರಾಜ್ಯ ಮಟ್ಟದ ಅನೇಕ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತು ಬೆಳಗ್ಗೆ 10.30ಕ್ಕೆ ಅಶೋಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಬಿ.ಎಚ್.ರಸ್ತೆ, ನೆಹರು ರಸ್ತೆ, ಗೋಪಿ ವೃತ್ತ ಮೂಲಕ ಬಾಲರಾಜ ಅರಸ್ ರಸ್ತೆಯ ಭೋವಿ ಸಮಾಜದ ಹಾಸ್ಟೆಲ್ ಆವರಣಕ್ಕೆ ತಲುಪಲಾಗುವುದು. ಅಲ್ಲಿ ನಡೆಯುವ ಸಮಾವೇಶದಲ್ಲಿ 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಶಾಸಕ ಬಿ.ಕೆ.ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಎಚ್.ಎಂ. ಚಂದ್ರಶೇಖರಪ್ಪ, ಬೇಳೂರು ಗೋಪಾಲಕೃಷ್ಣ, ಮುಖಂಡರಾದ ಮಂಜುನಾಥ ಗೌಡ ಸೇರಿ ಹಲವರು ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಯಾಗಿದ್ದರೂ ಅವರನ್ನು ಈವರೆಗೂ ಬಂಧಿಸಿಲ್ಲ. ಕೂಡಲೇ ಅವರನ್ನು ಬಂಧಿಸಬೇಕು. ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಐಡಿ ತನಿಖೆಯಲ್ಲಿ ಬಗೆದಷ್ಟು ಅಕ್ರಮಗಳು ಹೊರಬರುತ್ತಿದ್ದು, ಕೇವಲ ಮಧ್ಯವರ್ತಿಗಳನ್ನು ಬಂಧಿಸಿದರೆ ಸಾಲದು. ಹಗರಣದ ರೂವಾರಿಗಳು ವಿಧಾನಸೌಧದಲ್ಲಿಯೇ ಇದ್ದಾರೆ. ಅವರ ವಿರುದ್ಧವೂ ಕ್ರಮ ಜರುಗಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.
ಪಾಲಿಕೆ ಪ್ರತಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ರೇಖಾ ರಂಗನಾಥ್, ಮೆಹಕ್ ಷರೀಫ್, ಪ್ರಮುಖರಾದ ಇಸ್ಮಾಯಿಲ್ ಖಾನ್, ಚಂದ್ರಭೂಪಾಲ್, ಎಸ್. ರವಿಕುಮಾರ್, ಚಂದ್ರಶೇಖರ್, ಎಂ. ಚಂದನ್, ಪ್ರವೀಣ್ ಕುಮಾರ್ ಇತರರಿದ್ದರು.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ