SHIVAMOGGA LIVE NEWS | 18 MARCH 2023
SHIMOGA : ಕಾಂಗ್ರೆಸ್ ಪಕ್ಷವು ಅಧಿಕಾರಕ್ಕಾಗಿ ರಾಷ್ಟ್ರದ್ರೋಹಿ ಸಂಘಟನೆಗಳ (Organisation) ಜೊತೆಗೆ ಶಾಮೀಲಾಗುತ್ತಿದೆ. ಇದು ಆ ಪಕ್ಷದ ನೀಚತನಕ್ಕೆ ಸಾಕ್ಷಿಯಾಗಿದೆ. ಹಾಗಾಗಿ ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶರಪ್ಪ ಅಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ರಾಷ್ಟ್ರದ್ರೋಹಿ ಪಿಎಫ್ಐ ಮತ್ತು ಎಸ್.ಡಿ.ಪಿ.ಐ ಸಂಘಟನೆಗಳ (Organisation) ಜೊತೆಗೆ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿದೆ. ರಾಷ್ಟ್ರದ್ರೋಹಿ ಚಟುವಟಿಕೆ ಹಿನ್ನೆಲೆ ಪಿಎಫ್ಐ ಕಾರ್ಯಕರ್ತರನ್ನು ಗಡಿಪಾರು ಮಾಡಲಾಗಿದೆ. ಹಿಂದೂ ಹರ್ಷನ ಹತ್ಯೆ, ಸ್ವಾತಂತ್ರ್ಯ ವೀರ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ್ದು, ಕುಕ್ಕರ್ ಸ್ಪೋಟ ಆರೋಪಿಗಳು ಈ ಸಂಘಟನೆ ಜೊತೆಗೆ ಶಾಮೀಲಾಗಿದ್ದಾರೆ. ಇಂತಹ ಸಂಘಟನೆಗಳ ಜೊತೆಗೆ ಕಾಂಗ್ರೆಸ್ ಕೈ ಜೋಡಿಸಿದೆ ಎಂದು ಆರೋಪಿಸಿದರು.
ಇದನ್ನೂ ಓದಿ – ತಾಲೂಕು ಕೇಂದ್ರದಲ್ಲಿ ಜಿಲ್ಲಾ ಕೇಂದ್ರ ಮಾದರಿಯ ಸುಸಜ್ಜಿತ ಬಸ್ ನಿಲ್ದಾಣ, 20 ಬಸ್ಗಳ ಸಂಚಾರ ಶುರು
ರಾಜ್ಯ ಬಿಜೆಪಿ ಉಪಾಧ್ಯಕ್ಷ ಮತ್ತು ವಿಜಯ ಸಂಕಲ್ಪ ಯಾತ್ರೆ ಸಂಚಾಲಕ ಎಂ.ರಾಜೇಂದ್ರ, ಸಹ ಸಂಚಾಲಕ ಎಸ್.ದತ್ತಾತ್ರಿ, ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ್, ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.