ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 APRIL 2023
SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ (criticize) ಭರದಲ್ಲಿ ಅಲೆಮಾರಿ ಸಮುದಾಯಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಪಮಾನ ಮಾಡಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್ ಅವರು, ಈಶ್ವರಪ್ಪ ಅವರು ಅಲೆಮಾರಿ ಸಮುದಾಯವನ್ನು ಅವಮಾನಿಸಿದ್ದಾರೆ. 40 ಪರ್ಸೆಂಟ್ ಕಮಿಷನ್ ಆರೋಪದಲ್ಲಿ ಅಧಿಕಾರ ಕಳೆದುಕೊಂಡಿರುವ ಈಶ್ವರಪ್ಪ ಅವರಿಗೆ ಸಿದ್ದರಾಮಯ್ಯ ಅವರನ್ನು ಟೀಕಿಸುವ ನೈತಿಕತೆ ಇಲ್ಲ ಎಂದರು.
ಇದನ್ನೂ ಓದಿ – ಶಿವಮೊಗ್ಗ ಚೆಕ್ಪೋಸ್ಟ್ನಲ್ಲಿ ಈತನಕ ಏನೆಲ್ಲ ಸೀಜ್ ಆಗಿದೆ? ಎಷ್ಟು ಮೌಲ್ಯದ ನಗದು, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ?
ರಾಜಕೀಯ ಅಸ್ತಿತ್ವಕ್ಕೆ ಟೀಕೆ
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರನ್ನು ಟೀಕಿಸುವ ಮೂಲಕ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸ್ವಪಕ್ಷದಲ್ಲಿಯೇ ಈಶ್ವರಪ್ಪ ಅವರ ಟಿಕೆಟ್ ತಪ್ಪಿಸುವವರಿದ್ದಾರೆ. ಹಾಗಾಗಿಯೇ ಸಿದ್ದರಾಮಯ್ಯ ಅವರನ್ನು ಟೀಕಿಸುವ ಮೂಲಕ ಮುನ್ನಲೆಗೆ ಬರಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422