ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 3 ಜನವರಿ 2022
ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ, NSUI ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಚಿವ ಡಾ.ಅಶ್ವಥನಾರಾಯಣ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ NSUI ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಮನಗರ ಜಿಲ್ಲೆಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ. ಅಶ್ವಥನಾರಾಯಣ ಅವರು ಗೂಂಡಾ ವರ್ತನೆ ತೋರಿಸಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು, ‘ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ.ಅಶ್ವಥನಾರಾಯಣ ಅವರು ಗೂಂಡಾ ವರ್ತನೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಸೂಚನೆಯನ್ನೂ ಧಿಕ್ಕರಿಸಿದ್ದನ್ನು ಗಮನಿಸಬಹುದು. ದುರ್ವತನೆ ತೋರಿದ ಡಾ.ಅಶ್ವಥನಾರಾಯಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಸಂಸದ ಡಿ.ಕೆ.ಸುರೇಶ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.
ಪ್ರಮುಖರಾದ ವಿಜಯ ಕುಮಾರ್, ಚೇತನ್ ಗೌಡ, ಮಧುಸೂದನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422