SHIVAMOGGA LIVE NEWS | PROTEST | 24 ಮೇ 2022
ಒಂದೇ ಒಂದು ಮಳೆಗೆ ಶಿವಮೊಗ್ಗ ನಗರ ಮುಳುಗಿ ಹೋಗಿದೆ. ಕಳಪೆ ಮತ್ತು ಅವೈಜ್ಞಾನಿಕವಾಗಿರುವ ಸ್ಮಾರ್ಟ್ ಸಿಟಿ ಕಾಮಗಾರಿಯೆ ಇದಕ್ಕೆ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಇವತ್ತು ಪ್ರತಿಭಟನೆ ನಡೆಸಿದರು.
ಕುವೆಂಪು ರೋಡಲ್ಲಿ ರಸ್ತೆ ತಡೆ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನೆಸಿದರು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರ, ಶಾಸಕ, ಸಂಸದರ ವಿರುದ್ಧ ಘೋಷಣೆ ಕೂಗಿದರು.
ಒಂದು ದಿನದ ಮಳೆಗೆ ನಗರ ಮುಳುಗಡೆ
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು, ಒಂದು ದಿನದ ಅಕಾಲಿಕ ಮಳೆಯಿಂದ ಇಡೀ ಶಿವಮೊಗ್ಗ ಮುಳುಗಿತ್ತು. ಇದಕ್ಕೆ ಸ್ಮಾರ್ಟ್ ಸಿಟಿಯ ಕಳಪೆ ಕಾಮಗಾರಿ ಕಾರಣವಾಗಿದೆ. ಸುಂದರ ನಗರವನ್ನು ಹಾಳುಗೆಡವಿದ ಕೀರ್ತಿ ಬಿಜೆಪಿ ಶಾಸಕರು, ನಾಯಕರಿಗೆ ಸಲ್ಲುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ತಮಗೆ ಬೇಕಾದ ಬಡಾವಣೆಗಳಲ್ಲಿ ಮಳೆಹಾನಿ ಪರಿಶೀಲನೆ ನಡೆಸಿದ್ದಾರೆ ಎಂದು ಆರೋಪಿಸಿದರು.
ವರ್ಷ ಕಳೆದರೂ ಆರ್.ಎಂ.ಎಲ್ ನಗರದಲ್ಲಿ ರಾಜಾ ಕಾಲುವೆ ಕಾಮಗಾರಿ ಆಗಿಲ್ಲ. ತುಂಗಾ ಮೇಲ್ದೆಂಡೆ ಯೋಜನೆ ಚಾನಲ್ ತಡೆಗೋಡೆ ಎತ್ತರ ಮಾಡಬೇಕು. ಇವೆಲ್ಲವನ್ನು ಈ ಕೂಡಲೆ ಮಾಡಬೇಕು ಎಂದು ಸುಂದರೇಶ್ ಆಗ್ರಹಿಸಿದರು.
ಸಂಸದರು, ಶಾಸಕರ ವಿರುದ್ಧ ಆಕ್ರೋಶ
ಇದೆ ವೇಳೆ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಇವರ ವಿರುದ್ಧ ಘೋಷಣೆ ಕೂಗಿದರು.
ಪ್ರಮುಖರಾದ ರಾಮೇಗೌಡ, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ, ಕಾರ್ಪೊರೇಟರ್’ಗಳಾದ ಯಮುನಾ ರಂಗೇಗೌಡ, ರೇಖಾ ರಂಗನಾಥ್, ಮೆಹಕ್ ಷರೀಫ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್, ಪ್ರಮುಖರಾದ ದೇವೇಂದ್ರಪ್ಪ, ಶಿವಾನಂದ, ಚೇತನ್, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಚಂದನ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೇ ದಿನ 150ಕ್ಕೂ ಹೆಚ್ಚು ಜನರನ್ನು ಕಾಪಾಡಿದ ‘ಆಪತ್ಭಾಂಧವರು’, ಯಾರದು?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200