ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 19 ಡಿಸೆಂಬರ್ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪೌರತ್ವ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ದೊಡ್ಡ ಮಟ್ಟದ ಪ್ರತಿಭಟನಗೆ ಜಿಲ್ಲಾ ಕಾಂಗ್ರೆಸ್ ಸಜ್ಜಾಗಿತ್ತು. ಆದರೆ ನಿಷೇಧಾಜ್ಞೆ ಜಾರಿಯಾಗಿದ್ದರಿಂದ ಕೊನೆ ಕ್ಷಣದಲ್ಲಿ ಪ್ರತಿಭಟನೆ ಕೈಬಿಡಲು ಮುಖಂಡರು ನಿರ್ಧರಿಸಿದರು. ಇದನ್ನು ಘೋಷಿಸುತ್ತಿದ್ದಂತೆ, ಪ್ರತಿಭಟನೆ ನಡೆಸಿಯೆ ತೀರುವುದಾಗಿ ಕಾರ್ಯಕರ್ತರು ಪಟ್ಟು ಹಿಡಿದರು. ಇದರಿಂದ ಕಾಂಗ್ರೆಸ್ ಕಚೇರಿಯಲ್ಲಿ ಕೆಲಕಾಲ ಗೊಂದಲ ನಿರ್ಮಾಣವಾಯಿತು.
ಮುಖಂಡರ ಮೀಟಿಂಗ್
ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಾಗಿದ್ದರಿಂದ, ಪ್ರತಿಭಟನೆ ನಡೆಸಬೇಕೇ ಬೇಡವೆ ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು ಮೀಟಿಂಗ್ ನಡೆಸಿದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಮುಖರಾದ ತೀ.ನಾ.ಶ್ರೀನಿವಾಸ್, ವಿಶ್ವನಾಥ್ ಕಾಶಿ, ಕಾರ್ಪೊರೇಟರ್ ಯೋಗೇಶ್ ಸೇರಿದಂತೆ ಹಲವರು ಕಿರು ಸಭೆ ನಡೆಸಿದರು. ನಿಷೇಧಾಜ್ಞೆ ಇರುವುದರಿಂದ ಪ್ರತಿಭಟನೆ ನಡೆಸದಿರಲು ತೀರ್ಮಾನಿಸಿದರು.
ಪ್ರತಿಭಟಿಸುವ ಪಟ್ಟು ಹಿಡಿದ ಕಾರ್ಯಕರ್ತರು
ಪ್ರತಿಭಟನೆಯನ್ನು ಕ್ಯಾನ್ಸಲ್ ಮಾಡಲಾಗಿದೆ ಎಂದು ಮುಖಂಡರು ಘೋಷಿಸುತ್ತಿದ್ದಂತೆ ಕೆಲ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ತಾವು ಹೋರಾಟ ಮಾಡಿಯೇ ತೀರುವುದಾಗಿ ಘೋಷಿಸಿದರು. ಈ ವೇಳೆ ಕಾರ್ಯಕರ್ತರನ್ನು ಸಮಾಧಾನಪಡಿಸಲು ಮುಖಂಡರು ಹರಸಾಹಸ ಪಡಬೇಕಾಯಿತು. ಕೊನೆಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್ ಮತ್ತು ಸುಂದರೇಶ್ ಅವರು ಕಾರ್ಯಕರ್ತರನ್ನು ಸಮಾಧಾನಿಸಿದರು.
ಸಾಂಕೇತಿಕ ಹೋರಾಟ, ಘೋಷಣೆ
ಪ್ರತಿಭಟನೆ ಕೈಬಿಟ್ಟರೂ ಪಕ್ಷದ ಕಚೇರಿ ಒಳಗೆ ಕಾರ್ಯಕರ್ತರು ಸಾಂಕೇತಿಕವಾಗಿ ಹೋರಾಟ ನಡೆಸಿದರು. ಕೇಂದ್ರ ಸರ್ಕಾರ, ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.
ಟೈಟ್ ಪೊಲೀಸ್ ಸೆಕ್ಯೂರಿಟಿ
ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರತಿಭಟನೆ ನಡೆಸುವುದು ಕಾನೂನು ಬಾಹಿರವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸದಂತೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವರಿಕೆ ಮಾಡಿದರು. ಅಲ್ಲದೆ, ಮೈಕ್ ಮೂಲಕ ನಿಷೇಧಾಜ್ಞೆ ಕುರಿತು ಅನೌನ್ಸ್ ಮಾಡಿದರು. ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಡಿವೈಎಸ್’ಪಿ ಉಮೇಶ್ ನಾಯ್ಕ್, ಇನ್ಸ್’ಪೆಕ್ಟರ್’ಗಳು ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Congress cancels the protest against CAA in Shimoga as the district administration has imposed 144 section in the district.