ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಅಕ್ಟೋಬರ್ 2020
ಉತ್ತರ ಪ್ರದೇಶದಲ್ಲಿರುವುದು ನೀಚ ಸರ್ಕಾರ. ಯುವತಿ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಹತ್ಯೆಯನ್ನು ಸಮರ್ಥಿಸಿಕೊಳ್ಳುವ ಮಟ್ಟಕ್ಕೆ ಆ ಸರ್ಕಾರ ಹೋಗಿರುವುದು ತೀರಾ ಖಂಡನೀಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉತ್ತರ ಪ್ರದೇಶ ಹಾಥರಸ್ ಗ್ರಾಮದಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಹಾಗೂ ಉತ್ತರ ಪ್ರದೇಶ ಸರ್ಕಾರದ ದೌರ್ಜನ್ಯ, ದಬ್ಬಾಳಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಗಾಂಧಿಪಾರ್ಕ್‌ನ ಗಾಂಧಿ ಪ್ರತಿಮೆ ಎದುರು ಧರಣಿ ಸತ್ಯಾಗ್ರಹ ಉದ್ದೇಶಿಸಿ ಅವರು ಮಾತನಾಡಿದರು.
ದೇಶದಲ್ಲಿರುವ ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಅತ್ಯಾಚಾರ, ಕೊಲೆ, ದರೋಡೆ ಮುಂತಾದ ಪ್ರಕರಣಗಳು ನಡೆಯು ತ್ತಿದ್ದರೂ ಸಹ ಕೇಂದ್ರ ಸರ್ಕಾರ ಮೌನ ವಹಿಸಿದೆ. ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ಇಡೀ ದೇಶದ ಜನರ ನೆಮ್ಮದಿಯನ್ನೇ ಹಾಳು ಮಾಡಿದೆ. ಹಾಥರಸ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಮಹಾನಗರಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ. ಯೋಗೀಶ್, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್, ಕಲಗೋಡು ರತ್ನಾಕರ್, ವೈ.ಹೆಚ್.ನಾಗರಾಜ್, ಡಾ.ಶ್ರೀನಿವಾಸ್, ಆರ್.ಸಿ.ನಾಯ್ಕ, ವಿಶ್ವನಾಥ್ ಕಾಶಿ, ಚಂದ್ರಭೂಪಾಲ್, ಕೆ.ರಂಗನಾಥ್, ಹೆಚ್.ಪಿ.ಗಿರೀಶ್, ಮಧುಸೂದನ್, ಎಲ್.ರಾಮೇಗೌಡ, ಪಲ್ಲವಿ, ಡಿ.ಸಿ.ನಿರಂಜನ್, ಚಂದನ್, ಯಮುನಾ ರಂಗೇಗೌಡ, ಮೆಹಕ್ ಷರೀಫ್, ಕೆ.ಚೇತನ್ ಇನ್ನಿತರರು ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]