SHIVAMOGGA LIVE NEWS | 24 APRIL 2024
ELECTION NEWS : 65 ವರ್ಷದಲ್ಲಿ ದೇಶಕ್ಕೆ ಕಾಂಗ್ರೆಸ್ನ ಕೊಡುಗೆ ಏನು ಎಂಬುದನ್ನು ಚೊಂಬಿನ ಮೂಲಕ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರು ಸೊಪ್ಪು ಹಾಕುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಪಕ್ಷ ಕೇವಲ ಜಾಹೀರಾತಿಗೆ ಸೀಮಿತವಾಗಿದೆ. ಅವರಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಎಣಿಕೆ ದಿನ ಮತದಾರರ ಭಾವನೆ ಏನು ಅನ್ನುವುದು ಗೊತ್ತಾಗಲಿದೆ. 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದೇವೆ ಎಂದರು.
ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ರಾಜ್ಯಕ್ಕೆ ಹೆಚ್ಚು ಭಾರಿ ಬಂದು ಹೋಗಬೇಕು. ಇಲ್ಲವಾದಲ್ಲಿ ರಾಜ್ಯದ ಜನರು ಅವರನ್ನು ಮರೆತುಬಿಡುತ್ತಾರೆ.ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಇನ್ನೆರಡು ದಿನ ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿದ್ದೇನೆ. ಸದ್ಯ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಅಣ್ಣಾಮಲೈ ಆಗಮನ, ಚುನಾವಣ ಅಧಿಕಾರಿಗಳಿಂದ ಹೆಲಿಕಾಪ್ಟರ್, ಲಗೇಜ್ ಶೋಧ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200