ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 25 ಜನವರಿ 2020
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಅದಿತ್ಯರಾವ್‌ನನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಲು ಮುಂದಾಗಿರುವ ಬಿಜೆಪಿ ನಾಯಕರ ಕ್ರಮ ಖಂಡಿಸಿರುವ ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಬಿಜೆಪಿಗರು ಮಾನಸಿಕ ತಜ್ಞರಾ ಎಂದು ಪ್ರಶ್ನಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಹೆಸರಲ್ಲಿ ರಾಜ್ಯ ಮತ್ತು ದೇಶದೆಲ್ಲೆಡೆ ಹೋರಾಟ ನಡೆಯುತ್ತಿದೆ. ಈ ಹೋರಾಟ ಹತ್ತಿಕ್ಕುವಲ್ಲಿ ರಾಜ್ಯ ಬಿಜೆಪಿ ನಾಯಕರು ಯತ್ನಿಸುತ್ತಿದ್ದು ಇದೀಗ ಬಾಂಬ್ ಪ್ರಕರಣದ ಮೂಲಕ ಹೋರಾಟದ ದಿಕ್ಕು ತಪ್ಪಿಸುವ ಹುನ್ನಾರ ನಡೆಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
ಆದಿತ್ಯರಾವ್ ಹಿಂದು ಎಂಬ ಕಾರಣಕ್ಕೆ ಮಾನಸಿಕ ಅಸ್ವಸ್ಥನೆಂದು ಬಿಂಬಿಸಲು ಹೊರಟಿದ್ದಾರೆ. ಅದೇ ಮುಸ್ಲಿಂ ಅಥವಾ ಮತ್ಯಾವುದೋ ಅಲ್ಪಸಂಖ್ಯಾತರಾಗಿದ್ದರೆ ಉಗ್ರ ಪಟ್ಟ ಕಟ್ಟುತ್ತಿದ್ದರು. ಬಾಂಬ್ ಇಟ್ಟಿದ್ದ ಆರೋಪಿ ಮಾನಸಿಕ ಅಸ್ವಸ್ಥನೆಂದು ವೈದ್ಯಕೀಯ ಪರೀಕ್ಷೆ ನಡೆಸದೆ ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಕೇಂದ್ರದ ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್, ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಪ್ರಮಾಣ ಪತ್ರ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮೆಚ್ಚಿಸಲು ರಾಜ್ಯ ನಾಯಕರು ಇಂತಹ ಕೃತ್ಯಗಳಿಗೆ ಕೈ ಹಾಕಿದ್ದಾರೆ ಎಂದು ದೂರಿದರು. ಐಎನ್‌ಟಿಯುಸಿ ಜಿಲ್ಲಾಧ್ಯಕ್ಷೆ ಕವಿತಾ ರಾಘವೇಂದ್ರ, ರವಿಕುಮಾರ್, ಅಣ್ಣಪ್ಪ ಕುಂಸಿ, ಜಫುಲ್ಲಾ ಷರೀಫ್, ಸೈಮನ್, ರಾಜ್, ಸೈಯದ್ ಮುಜೀಬುಲ್ಲಾ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422