‘ಶಿವಮೊಗ್ಗ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರದ್ದೇ ಮೇಲುಗೈ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಬಹು ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಬಹುಮತ ಪಡೆಯುವುದರ ಮೂಲಕ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್‍.ಎಸ್.ಸುಂದರೇಶ್, ಜಿಲ್ಲೆಯ 224 ಗ್ರಾ.ಪಂ.ಗಳ 2,609 ಸ್ಥಾನಗಳಿಗೆ ನಡೆದ ಗ್ರಾ.ಪಂ.ಚುನಾವಣೆಯಲ್ಲಿ, ರಾಜಕೀಯ ಪಕ್ಷದ ಚಿಹ್ನೆ ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷದಿಂದ ಪ್ರಾತಿನಿಧಿಕವಾಗಿ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದರು.

ಜಿಲ್ಲೆಯ ಸಾಗರ, ಭದ್ರಾವತಿ ಮತ್ತು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾಂಗ್ರೆಸ್‍ಗೆ ಸ್ಪಷ್ಟ ಬಹುಮತ ಲಭಿಸಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ.50ರಷ್ಟು, ಮುಖ್ಯಮಂತ್ರಿ ಅವರ ತವರು ಕ್ಷೇತ್ರದಲ್ಲಿ ಶೇ.45ರಷ್ಟು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದರು.

ಸೊರಬ ತಾಲ್ಲೂಕಿನ ಸೊರಬ ಬ್ಲಾಕ್‍ನಲ್ಲಿ ಶೇ.50ರಷ್ಟು ಸಾಧನೆ ಮಾಡಿ ಆನವಟ್ಟಿ ಬ್ಲಾಕ್‍ನಲ್ಲಿ ಬಹುಮತ ಗಳಿಸಿಕೊಂಡಿದೆ. ಒಟ್ಟಾರೆ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಮುನ್ನಡೆ ಪಡೆದುಕೊಂಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಪಾಲಿಕೆ ವಿಪಕ್ಷ ನಾಯಕ ಹೆಚ್.ಸಿ.ಯೋಗೀಶ್, ಸಿ.ಎಸ್.ಚಂದ್ರಭೂಪಾಲ ಸೇರಿದಂತೆ ಹಲವರಿದ್ದರು.

134734417 1036257136854196 2172322943690786426 n.jpg? nc cat=110&ccb=2& nc sid=e3f864& nc ohc=g3hccCiUu4YAX EeqUC& nc ht=scontent.fblr11 1

133284519 1032085710604672 6624893350028932004 n.jpg? nc cat=100&ccb=2& nc sid=8bfeb9& nc ohc=f zxF8ODvDIAX9NHTlx& nc ht=scontent.fblr1 6

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment