ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾರ್ಯಕರ್ತೆಯರ ಸಭೆ (Meeting) ಆಯೋಜಿಸಲಾಗಿತ್ತು. ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಸಭೆ ಉದ್ಘಾಟಿಸಿದರು.
ಸೌಮ್ಯಾ ರೆಡ್ಡಿ ಏನೆಲ್ಲ ಹೇಳಿದರು?
ಮುಂಬರಲಿರುವ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತೆಯರು ಶ್ರಮ ವಹಿಸಬೇಕು.
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್ ಮಾಡಿ
ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಮಾತ್ರ ಜನಸೇವೆ ಮಾಡಲು ಹಾಗೂ ಅಧಿಕಾರದಲ್ಲಿ ಇರಲು ಸಾಧ್ಯ.
ಕಾರ್ಯಕರ್ತೆಯರು ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕೆಲಸ ಮಾಡಬೇಕು. ಪಕ್ಷದ ಸದಸ್ಯತ್ವ ಹೆಚ್ಚಿಸಬೇಕು. ಸರ್ಕಾರದ ಕಾರ್ಯಕ್ರಮಗಳನ್ನು ಜನರ ಮನಮುಟ್ಟಿಸಬೇಕು.
ಜಾತಿ, ಧರ್ಮದ ಹೆಸರಲ್ಲಿ ಬಿಜೆಪಿ ಜನರನ್ನು ಬೇರೆ ಮಾಡಿತು. ಆದರೆ ಕಾಂಗ್ರೆಸ್ ಎಲ್ಲರನ್ನೂ ಒಂದಾಗಿ ಒಯ್ಯುತ್ತಿದೆ.

ಪ್ರಣಾಳಿಕೆ ಸಿದ್ದಪಡಿಸುವ ವೇಳೆ ಮಹಿಳೆಯರಿಗೆ ಆದ್ಯತೆ ನೀಡುವಂತೆ ಪಕ್ಷದ ವರಿಷ್ಠರು ತಿಳಿಸಿದ್ದರು. ಹಾಗಾಗಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ನೀಡಲಾಯಿತು. ಮಹಿಳೆಯರಿಗೆ ಅಧಿಕಾರ ಕೊಡಿಸಲು, ಶಕ್ತಿ ತುಂಬಲು ಸಹಕಾರ ನೀಡಲಾಗುವುದು. ಮಹಿಳೆಯರ ಸಂಘಟನೆಯಿಂದ ಕಾಂಗ್ರೆಸ್ ಪಕ್ಷದ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು.
– ಮಧು ಬಂಗಾರಪ್ಪ, ಸಚಿವ
ಕಾಂಗ್ರೆಸ್ ಪಕ್ಷ ಯಾವಾಗಲು ಮಹಿಳೆಯರ ಪರ ನಿಂತಿದೆ. ಜಾತ್ಯತೀತವಾಗಿ ಎಲ್ಲರಿಗು ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ. ಎಲ್ಲರು ವೈಮನಸು ಬಿಟ್ಟು ಪಕ್ಷ ಸಂಘಟನೆ ಮಾಡಿ, ಮುಂದಿನ ಚುನಾವಣೆಗಳಲ್ಲಿ ಗೆಲುವು ಸಾಧಿಸಬೇಕು.
– ಬಲ್ಕಿಸ್ ಬಾನು, ವಿಧಾನ ಪರಿಷತ್ ಸದಸ್ಯೆ
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ, ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಮಾಜಿ ಸಂಸದ ಆಯನೂರು ಮಂಜುನಾಥ್, ಭೋವಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ತುಂಗಾ ಜಲಾಶಯ ಭರ್ತಿ, ನಾಲ್ಕು ಗೇಟ್‌ಗಳು ಓಪನ್








