SHIVAMOGGA LIVE | 8 JULY 2023
SHIMOGA : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಲೋಕಸಭೆ ಸದಸ್ಯತ್ವ ರದ್ದುಗೊಳಿಸಲು ಕೇಂದ್ರ ಸರ್ಕಾರ ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಸುರಿವ ಮಳೆಯಲ್ಲು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ರಾಹುಲ್ ಗಾಂಧಿ ಅವರ ಧ್ವನಿ ಅಡಗಿಸಲು ಕೇಂದ್ರ ಸರ್ಕಾರ ಇನ್ನಿಲ್ಲಿದ ಪ್ರಯತ್ನ ಮಾಡುತ್ತಿದೆ ಎಂದು ಆಪಾದಿಸಿದರು.
ಇದನ್ನೂ ಓದಿ – ಶಂಕರಘಟ್ಟದ ಕುವೆಂಪು ವಿವಿ ಕ್ಯಾಂಪಸ್ನಲ್ಲಿ ಮತ್ತೆ ಪ್ರತಿಭಟನೆ, ಕುಲಪತಿಗೆ ಮುತ್ತಿಗೆ ಯತ್ನ, ಕಾರಣವೇನು?
ದ್ವೇಷ ಮತ್ತು ಪಿತೂರಿ ಮಾಡಿ ರಾಹುಲ್ ಗಾಂಧಿ (Rahul Gandhi) ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲು ಪ್ರಯತ್ನ ನಡೆಸಲಾಗುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಬುಡಮೇಲು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಒಂದು ಕೈಯಲ್ಲಿ ಮೊಬೈಲ್, ಮತ್ತೊಂದರಲ್ಲಿ ಡ್ರೈವಿಂಗ್, ವಿಡಿಯೋ ಮಾಡಿ ಪೊಲೀಸರಿಗೆ ಕಳುಹಿಸಿದ ಪ್ಯಾಸೆಂಜರ್, ಮುಂದೇನಾಯ್ತು?
ಪ್ರತಿಭಟನೆಯಲ್ಲಿ ಸಿ.ಎಸ್.ಚಂದ್ರಭೂಪಾಲ್, ಎನ್.ಡಿ.ಪ್ರವೀಣ್ ಕುಮಾರ್, ಕಲೀಂ ಪಾಷಾ, ಮಹಮ್ಮದ್ ಇಮ್ರಾನ್, ಆರೀಫ್, ಸುವರ್ಣ ನಾಗರಾಜ್, ಸ್ಟೆಲ್ಲಾ ಮಾರ್ಟೀನ್ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200