SHIVAMOGGA LIVE NEWS | 4 JUNE 2024
RESULT NEWS : ಶಿವಮೊಗ್ಗದಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ಮುಗಿದಿದೆ (Counting Complete). ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಕಳೆದ ಲೋಕಸಭೆ ಚುನಾವಣೆಗಿಂತಲು ಹೆಚ್ಚು ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಕಳೆದ ಬಾರಿ ಮಧು ಬಂಗಾರಪ್ಪ ಪಡೆದಿದ್ದಕ್ಕಿಂತಲು ಹೆಚ್ಚು ಮತ ಸಂಪಾದಿಸಿದ್ದಾರೆ.
ಬಿ.ವೈ.ರಾಘವೇಂದ್ರ 7,78,721 ಮತ ಪಡೆದಿದ್ದಾರೆ. 2019ರಲ್ಲಿ ರಾಘವೇಂದ್ರ 7,29,872 ಮತ ಗಳಿಸಿದ್ದರು. ಕಳೆದ ಬಾರಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ 5,06,512 ಪಡೆದಿದ್ದರು. ಈಗ ಗೀತಾ ಶಿವರಾಜ್ ಕುಮಾರ್ 5,33,622 ಮತ ಪಡೆದಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಎಣಿಕೆ ಕೇಂದ್ರದ ಮುಂದೆ ಕೊಬ್ಬರಿ ಹಾರ ತಂದು ಸಂಭ್ರಮಾಚರಣೆ
ಬಿ.ವೈ.ರಾಘವೇಂದ್ರ ಅವರ ಗೆಲುವಿನ ಅಂತರವು ಹೆಚ್ಚಳವಾಗಿದೆ. ಕಳೆದ ಬಾರಿ 2,23,360 ಮತಗಳ ಅಂತರದಲ್ಲಿ ಗೆದ್ದಿದ್ದರು. ಈ ಬಾರಿ 2,42,109 ಅಂತರದಿಂದ ಗೆಲುವು ಸಾಧಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200