ಟಿಕೆಟ್ ಘೋಷಣೆ ಮೊದಲು ಒಗ್ಗಟ್ಟು, ಈಗ ಹೊಸ ಬಿಕ್ಕಟ್ಟು, ಏನಾಗ್ತಿದೆ ಶಿವಮೊಗ್ಗ ಕಾಂಗ್ರೆಸ್‌ನಲ್ಲಿ?

Published On : ಏಪ್ರಿಲ್ 18, 2023

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 18 APRIL 2023

SHIMOGA : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಶಿವಮೊಗ್ಗ ಕಾಂಗ್ರೆಸ್‍ನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವಿಚಾರ ಹರಡುತ್ತಿದ್ದಂತೆ ಪಕ್ಷದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಟಿಕೆಟ್ ಆಕಾಂಕ್ಷಿಗಳು ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ಬೆಂಗಳೂರಿಗೆ ತೆರಳಿ ರಾಜ್ಯ ನಾಯಕರ ಮುಂದೆ ಪರೇಡ್ ಮಾಡಿದ್ದರು. ಈಗ ಆಕಾಂಕ್ಷಿಗಳಲ್ಲಿ ಒಬ್ಬರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಬಿಕ್ಕಟ್ಟು (Crisis) ಶುರುವಾಗಿದೆ.

ಬೆಂಗಳೂರಿನಲ್ಲಿ ನಾಯಕರ ಮುಂದೆ ಒಗ್ಗಟ್ಟು

ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್‍ಗಾಗಿ 11 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಇದೆ ವೇಳೆ ಆಯನೂರು ಮಂಜುನಾಥ್ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಶಿವಮೊಗ್ಗದಿಂದ ಅವರೆ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಲಾಗಿತ್ತು. ಇದರಿಂದ ಸಿಡಿದೆದ್ದ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿನಲ್ಲಿ ರಾಜ್ಯ ನಾಯಕರನ್ನು ಭೇಟಿಯಾಗಿದ್ದರು. 11 ಆಕಾಂಕ್ಷಿಗಳಲ್ಲಿ ಯಾರಿಗೆ ಟಿಕೆಟ್ ನೀಡಿದರು ಒಗ್ಗಟ್ಟಾಗಿ ನಿಂತು ಗೆಲ್ಲಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು.

Shimoga-Congress-Aspirants-meet-Siddaramaiah

ಕೈ ನಾಯಕರ ಮಧ್ಯೆ ಒಗ್ಗಟ್ಟು

ಆಯನೂರು ಮಂಜುನಾಥ್ ಅವರು ಕಾಂಗ್ರೆಸ್ ಸೇರ್ಪಡೆ ಕುರಿತ ಸುದ್ದಿ ಜೀವಂತ ಇರುವಷ್ಟು ದಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ನಡುವೆ ಒಗ್ಗಟ್ಟು ಕಾಣಿಸಿತ್ತು. ಒಟ್ಟಾಗಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದರು. ಪಕ್ಷದ ಹೊರಗಿನವರಿಗೆ ಟಿಕೆಟ್ ನೀಡಿದರೆ ಸಹಿಸಿಕೊಳ್ಳುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದರು. ವಾರ್ಡ್ ಅಧ್ಯಕ್ಷರುಗಳು ಕೂಡ ಪಕ್ಷದೊಳಗಿನವರಿಗೆ ಟಿಕಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಶಿವಮೊಗ್ಗ ಕಾಂಗ್ರೆಸ್‍ನಲ್ಲಿ ಒಗ್ಗಟ್ಟು ಮೂಡಿದಂತೆ ತೋರಿತ್ತು.

Protest-by-KB-Prasanna-Kumar-followers

ಟಿಕೆಟ್ ಘೋಷಣೆ ಬಳಿಕ ಬಿಕ್ಕಟ್ಟು

ಶಿವಮೊಗ್ಗ ನಗರದ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಲಾಗಿದೆ. 11 ಆಕಾಂಕ್ಷಿಗಳ ಪೈಕಿ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೇಶ್ ಅವರಿಗೆ ಟಿಕಟ್ ಘೊಷಣೆ ಮಾಡಲಾಗಿದೆ. ಇದಾದ ಬಳಿಕ ಕಾಂಗ್ರೆಸ್‍ನಲ್ಲಿ ಬಿಕ್ಕಟ್ಟು (Crisis) ಆರಂಭವಾಗಿದೆ. ಟಿಕೆಟ್ ಆಕಾಂಕ್ಷಿಗಳಾಗಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಮತ್ತು ಜಿಲ್ಲಾಧ್ಯಕ್ಷ ಹೆಚ್‍.ಎಸ್.ಸುಂದರೇಶ್ ಅವರ ಬೆಂಬಲಿಗರು ಸಿಡಿದೆದ್ದಿದ್ದಾರೆ. ಸಭೆಗಳನ್ನು ನಡೆಸಿ, ಪ್ರತಿಭಟನೆಗಳನ್ನು ಮಾಡಿ, ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.

Protest-by-Sundresh-Followers-in-Shimoga

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಕ್ಷೇತ್ರದಲ್ಲಿ ಇವತ್ತು ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ? ಇಲ್ಲಿದೆ ಪೂರ್ತಿ ಡಿಟೇಲ್ಸ್

ಮುಂದೇನು ಅನ್ನುವುದೆ ಕುತೂಹಲ?

ಅಭ್ಯರ್ಥಿ ಘೋಷಣೆಯಾಗಿದೆ. ಈ ಹೊತ್ತಿಗಾಗಲೇ ಪ್ರಚಾರ ಕಾರ್ಯ ಬಿರುಸಾಗಬೇಕಿತ್ತು. ಆದರೆ ಕಾಂಗ್ರೆಸ್‍ನಲ್ಲಿ ಭಿನ್ನಮತದ ಸದ್ದು ಜೋರಾಗಿದೆ. ತಮ್ಮ ನಾಯಕನಿಗೆ ಟಿಕೆಟ್ ಕೊಡದಿದ್ದರೆ ಚುನಾವಣಾ ಕೆಲಸವನ್ನೆ ಮಾಡುವುದಿಲ್ಲ ಎಂದು ಪ್ರಸನ್ನ ಕುಮಾರ್ ಮತ್ತು ಸುಂದರೇಶ್ ಅವರ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿ ಮುಂದೇನಾಗುತ್ತೆ ಎಂಬ ಕುತೂಹಲಕ್ಕೆ ಕಾರಣವಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 18, 2023

Leave a Comment