‘ಅವರು ಸಣ್ಣ ಮೀನು, ದೊಡ್ಡ ದೊಡ್ಡ ತಿಮಿಂಗಿಲಗಳಿವೆ’, ಶಿವಮೊಗ್ಗದಲ್ಲಿ ವಿಜಯೇಂದ್ರ ಫಸ್ಟ್‌ ರಿಯಾಕ್ಷನ್‌

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

‘ದೊಡ್ಡ ದೊಡ್ಡ ತಿಮಿಂಗಿಲಗಳಿವೆʼ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ‘ನಾಗೇಂದ್ರ ಅವರು ಸಣ್ಣ ಮೀನು ಅಷ್ಟೇ. ಈ ಹಗರಣದಲ್ಲಿ ದೊಡ್ಡ ದೊಡ್ಡ ತಿಮಿಂಗಿಲಗಳು ಭಾಗಿಯಾಗಿವೆ. ನಮ್ಮ ಹೋರಾಟ ಸಚಿವ ನಾಗೇಂದ್ರ ರಾಜೀನಾಮೆಗೆ ಸೀಮಿತವಲ್ಲ. ನಿಗಮಕ್ಕೆ ₹187 ಕೋಟಿ ಹಣ ವಾಪಸ್ ಬರುವವರೆಗೆ ಹಾಗೂ ಹಗರಣದ ಸಂಪೂರ್ಣ ಸತ್ಯ ಹೊರಬರುವವರೆಗೆ ಹೋರಾಟ ಮುಂದುವರಿಯಲಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್ ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲʼ ಎಂದು ಕಿಡಿಕಾರಿದರು.

BJP-President-B-Y-Vijayendra-in-Shikaripura

ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಮಾತನಾಡಿ, ಭ್ರಷ್ಟಾಚಾರ ಆರೋಪ ಹೊತ್ತಿದ್ದ ನಾಗೇಂದ್ರ ಅವರನ್ನು ತರಾತುರಿಯಲ್ಲಿ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಅನಿವಾರ್ಯತೆ ಏನಿತ್ತು. ಮೃತ ಚಂದ್ರಶೇಖರ್ ಡೆತ್‌ ನೂಟ್‌ನಲ್ಲಿ ನೀಡಿರುವ ಉಲ್ಲೇಖಗಳು ಹಾಗೂ ಇ.ಡಿ ತನಿಖೆಯ ಅಂಶಗಳ ಕುರಿತು ಕಾಂಗ್ರೆಸ್ ನಾಯಕರು ಸ್ಪಷ್ಟನೆ ನೀಡಬೇಕು ಎಂದರು.

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ, ನಾಗೇಂದ್ರ ರಾಜೀನಾಮೆ ಸಮಾಧಾನ ತಂದಿದೆ. ರಾಜೀನಾಮೆ ಬಳಿಕ ನಾಗೇಂದ್ರ ಅವರು ದಲಿತ ಗುರಾಣಿಯನ್ನು ಬಳಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ