ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 APRIL 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಬಿಜೆಪಿ ಅಭ್ಯರ್ಥಿಗಳ ಮೂರನೆ ಪಟ್ಟಿ (Third list) ಬಿಡುಗಡೆಯಾಗಿದೆ. ಹತ್ತು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಆದರೆ ಈ ಪಟ್ಟಿಯಲ್ಲಿ ಶಿವಮೊಗ್ಗ ಕ್ಷೇತ್ರದ ಹೆಸರು ಇಲ್ಲ. ಹಾಗಾಗಿ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಕುರಿತು ಕುತೂಹಲ ಇನ್ನೂ ಮುಂದುವರೆದಿದೆ.
ಮೂರನೆ ಪಟ್ಟಿಯಲ್ಲಿ (Third list) ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯ ಹೆಸರು ಪ್ರಕಟವಾಗಲಿದೆ ಎಂದು ಕಾರ್ಯಕರ್ತರು ನಿರೀಕ್ಷಿಸಿದ್ದರು. ಆದರೆ ಅಳೆದು ತೂಗಿ ಹತ್ತು ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಿರುವ ಬಿಜೆಪಿ, ಶಿವಮೊಗ್ಗ ಕ್ಷೇತ್ರದ ಕುರಿತು ಕುತುಹೂಲ ಮುಂದುವರೆಯುವಂತೆ ಮಾಡಿದೆ.
ಇದನ್ನೂ ಓದಿ – ಜೊತೆ ಜೊತೆಗೆ ಕಾಣಿಸಿಕೊಂಡ ಈಶ್ವರಪ್ಪ, ಸರ್ಜಿ, ಕುತೂಹಲ ಮೂಡಿಸಿದ ಬೆಳವಣಿಗೆ
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಗಾಗಿ ಶಿವಮೊಗ್ಗದಲ್ಲಿ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬ ಲೆಕ್ಕಾಚಾರ ಗರಿಗೆದರಿದೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪತ್ರ ಕೆ.ಈ.ಕಾಂತೇಶ್, ಎಸ್.ಎನ್.ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಎಸ್.ಎಸ್.ಜ್ಯೋತಿ ಪ್ರಕಾಶ್ ಸೇರಿದಂತೆ ಹಲವರ ಹೆಸರು ಮುನ್ನಲೆಗೆ ಬಂದಿದೆ. ಈಗ ನಾಲ್ಕೆನೆ ಪಟ್ಟಿಯತ್ತ ಕಾರ್ಯಕರ್ತರು ಕಣ್ಣು ನೆಟ್ಟಿದ್ದಾರೆ.