SHIVAMOGGA LIVE NEWS | 17 MARCH 2023
SHIMOGA : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ (congress party) ಅಭ್ಯರ್ಥಿಗಳ ಮೊದಲ ಪಟ್ಟಿ ಯಾವುದೆ ಸಂದರ್ಭದಲ್ಲಿ ಬೇಕಿದ್ದರೂ ಬಿಡುಗಡೆಯಾಗುವ ಸಂಭವವಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ನವದೆಹಲಿಯಲ್ಲಿ ಸಾಲು ಸಾಲು ಸಭೆಗಳು ನಡೆಯುತ್ತಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಆಕಾಂಕ್ಷಿಗಳು ಮತ್ತು ಅವರ ಬೆಂಬಲಿಗರಲ್ಲಿ ನಿರೀಕ್ಷೆ ಗರಿಗೆದರಿದೆ.
ಯಾವೆಲ್ಲ ಕ್ಷೇತ್ರಕ್ಕೆ ಘೋಷಣೆಯಾಗುತ್ತೆ?
ಮೊದಲ ಪಟ್ಟಿಯಲ್ಲಿ ಸುಮಾರು 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ (congress party) ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಒಂದು ವೇಳೆ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದರೆ ಶಿವಮೊಗ್ಗ ಜಿಲ್ಲೆಯ ಮೂರು ಅಥವಾ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗುವ ಸಾಧ್ಯತೆ ಇದೆ ಎಂಬ ಲೆಕ್ಕಾಚಾರವಾಗಿದೆ.
![]() |
ಮೊದಲ ಪಟ್ಟಿಯಲ್ಲಿ ಭದ್ರಾವತಿ ಮತ್ತು ಸೊರಬ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗುವುದು ಬಹುತೇಕ ನಿಶ್ಚಿತ. ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ್ ಮತ್ತು ಸೊರಬದಲ್ಲಿ ಮಧು ಬಂಗಾರಪ್ಪ ಅವರಿಗೆ ಪ್ರತಿಸ್ಪರ್ಧಿಗಳೆ ಇಲ್ಲ. ಹಾಗಾಗಿ ಇವೆರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸುವುದು ಹೈಕಮಾಂಡ್ ಗೆ ಸುಲಭವಾಗಲಿದೆ.
ಇನ್ನು, ಸಾಗರ ಮತ್ತು ತೀರ್ಥಹಳ್ಳಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಅವರ ನಡುವಿನ ವೈಮನಸು ಶಮನಗೊಳಿಸಲಾಗಿದೆ. ಸಾಗರ ಕ್ಷೇತ್ರದಲ್ಲಿಯು ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಬಹತೇಕ ಫೈನಲ್ ಆಗಿದೆ ಎನ್ನಲಾಗುತ್ತಿದೆ. ಹಾಗಾಗಿ ಇವೆರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾದರು ಅಚ್ಚರಿ ಪಡುವಂತಿಲ್ಲ.
ಇದನ್ನೂ ಓದಿ – ಶಿವಮೊಗ್ಗದ ಲಕ್ಷ್ಮಿ ಟಾಕೀಸ್ ಇನ್ನು ನೆನಪಷ್ಟೇ, ಟಾಕೀಸ್ ಬಗ್ಗೆ ನಿಮಗೆಷ್ಟು ಗೊತ್ತು? ಮುಂದೇನಾಗುತ್ತೆ ಇಲ್ಲಿ?
ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಇದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕ್ಷೇತ್ರವಾಗಿರುವುದರಿಂದ ಶಿಕಾರಿಪುರ ಕ್ಷೇತ್ರದ ಕುರಿತು ಮತ್ತಷ್ಟು ಲೆಕ್ಕಾಚಾರದ ಅಗತ್ಯವಿದೆ. ಹೀಗಾಗಿ ಈ ಮೂರು ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳ ಘೋಷಣೆ ಕಷ್ಟ ಅನ್ನುವುದು ಕಾಂಗ್ರೆಸ್ ಕಾರ್ಯಕರ್ತರ ಅಭಿಪ್ರಾಯ.
ದೆಹಲಿಗೆ ದೌಡಾಯಿಸಿದ ಅಕಾಂಕ್ಷಿಗಳು
ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಹಿನ್ನೆಲೆ ರಾಜ್ಯದ ವಿವಿಧೆ ಕ್ಷೇತ್ರಗಳ ಆಕಾಂಕ್ಷಿಗಳು ದೆಹಲಿಗೆ ದೌಡಾಯಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳು ಕೂಡ ನವದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಕೊನೆ ಹಂತದಲ್ಲಿ ಟಿಕೆಟ್ ಲಾಬಿ ಮುಂದುವರೆಸಿದ್ದಾರೆ. ತಮ್ಮ ನಾಯಕರು, ಪರಿಚಿತರ ಮೂಲಕ ಟಿಕೆಟ್ ಕಮಿಟಿಯ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ.
ಕಾರ್ಯಕರ್ತರ ಲೆಕ್ಕಾಚಾರ
ಇತ್ತ ಶಿವಮೊಗ್ಗದಲ್ಲಿ ಎಲ್ಲಾ ಆಕಾಂಕ್ಷಗಳು ಮತ್ತು ಅವರ ಬೆಂಬಲಿಗರು ಕೊನೆ ಕ್ಷಣದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ನ ಮಾನದಂಡ, ಸ್ಕ್ರೀನಿಂಗ್ ಕಮಿಟಿಯ ಚರ್ಚೆಗಳು, ಜಾತಿ ಬಲ, ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ಹೋರಾಟಗಳನ್ನು ಗಣನೆಗೆ ತೆಗೆದುಕೊಂಡು ಲೆಕ್ಕಾಚಾರ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಕೃಷಿ ಮೇಳ, ರೈತರಷ್ಟೆ ಅಲ್ಲ ಮಹಿಳೆಯರು, ಮಕ್ಕಳನ್ನು ಸೆಳೆಯುತ್ತಿವೆ ಸ್ಟಾಲ್ಸ್, ಹೇಗಿದೆ? ಏನೇನಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200