ತರಕಾರಿ ಹಾರ ಧರಿಸಿ, ನಡುರಸ್ತೆಯಲ್ಲೇ ಒಲೆ ಹಚ್ಚಿ, ಅಡುಗೆ ಮಾಡಿ ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು. ನಡು ರಸ್ತೆಯಲ್ಲೇ ಸೌದೆ ಒಲೆ ಹಚ್ಚಿ ಅಡುಗೆ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಶಿವಪ್ಪನಾಯಕ ಪ್ರತಿಮೆ ಬಳಿ ನಡು ರಸ್ತೆಯಲ್ಲೇ ಒಲೆ ಹಚ್ಚಿ ವಿಭಿನ್ನವಾಗಿ ಪ್ರತಿಭಟಿಸಲಾಯಿತು. ಬೋಂಡ ಕರೆದು,  ಟೀ ಮಾಡಿ ಎಲ್ಲರಿಗೂ ಹಂಚಿ ಪ್ರತಿಭಟನೆ ನಡೆಸಲಾಯಿತು.

ತರಕಾರಿ ನೆಕ್‍ಲೆಸ್ ತೊಟ್ಟು ಆಕ್ರೋಶ

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯರು ತರಕಾರಿಯನ್ನೇ ನೆಕ್‍ಲೆಸ್ ರೀತಿ ತೊಟ್ಟಿದ್ದರು. ತರಕಾರಿಗೆ ಚಿನ್ನದಷ್ಟು ಬೆಲೆ ಬಂದಿದೆ. ಹಾಗಾಗಿ ತರಕಾರಿ ಸರವನ್ನು ತೊಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.

ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ

ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನ ಸಾಮಾನ್ಯರ ಬಗ್ಗೆ ಕಾಳಜಿ ಇಲ್ಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಈತನಕ ಸರ್ಕಾರ ಕ್ರಮ ಕೈಗೊಂಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾಧ‍್ಯಕ್ಷ ಹೆಚ್.ಎಸ್.ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು.

VIDEO REPORT

ಮಹಾನಗರ ಪಾಲಿಕೆ ಸದಸ್ಯರಾದ ಹೆಚ್‍.ಸಿ.ಯೋಗೇಶ್, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಪ್ರಮುಖರಾದ ಇಸ್ಮಾಯಿಲ್ ಖಾನ್, ಎಲ್.ರಾಮೇಗೌಡ, ಎಸ್.ಪಿ.ಶೇಷಾದ್ರಿ, ಎನ್.ರಮೇಶ್‍, ವೈ.ಹೆಚ್‍.ನಾಗರಾಜ್, ವಿಶ್ವನಾಥ ಕಾಶಿ, ವಿಜಯಲಕ್ಷ್ಮೀ ಪಾಟೀಲ್, ಎನ್‍.ಡಿ.ಪ್ರವೀಣ್ ಕುಮಾರ್, ಚಂದನ್, ಸೌಗಂಧಿಕಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 6, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment