ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JUNE 2021
ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರ ಬಿಜೆಪಿ ಜಿಲ್ಲಾ ಘಟಕದಲ್ಲಿ ಕುತೂಹಲ ಕೆರಳಿಸಿದೆ. ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ.
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಇದು ಬಿಜೆಪಿ ಪಾಳಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಇಬ್ಬರಿಗೆ ಸಚಿವ ಸ್ಥಾನ ಪಕ್ಕಾ
ಈ ನಡುವೆ ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದ ಇಬ್ಬರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ಭರವಸೆ ಇದೆ. ಆದರೆ ಯಾರಿಗೆಲ್ಲ ಅವಕಾಶ ನೀಡಲಾಗುತ್ತದೆ ಎಂಬುದು ಗೊತ್ತಿಲ್ಲ ಎಂದಿದ್ದರು.
ರಾಘವೇಂದ್ರ ಸಚಿವರಾದರೆ ಅನುಕೂಲವೇನು?
ಬಿ.ವೈ.ರಾಘವೇಂದ್ರ ಅವರು ಸಚಿವರಾದರೆ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗಲಿದೆ. ಈಗಾಗಲೇ ನಡೆಯುತ್ತಿರುವ ಕೆಲಸಗಳು ಮತ್ತಷ್ಟು ವೇಗ ಪಡೆದುಕೊಳ್ಳಲಿವೆ ಅನ್ನುತ್ತಾರೆ ಬಿ.ವೈ.ರಾಘವೇಂದ್ರ ಅವರ ಬೆಂಬಲಿಗರು
ಸಂಸದ ರಾಘವೇಂದ್ರ ಹೇಳುವುದೇನು?
ಕೇಂದ್ರ ಸಚಿವರಾಗುವ ಕುರಿತು ಚರ್ಚೆಯ ಬೆನ್ನಿಗೆ ಇವತ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ,ರಾಘವೇಂದ್ರ, ನನಗೆ ಆ ವಿಚಾರ ಗೊತ್ತಿಲ್ಲ ಎಂದಷ್ಟೆ ತಿಳಿಸಿದ್ದಾರೆ.
ಸಂಸದ ರಾಘವೇಂದ್ರ ಕೇಂದ್ರ ಸಚಿವರಾಗುವ ವಿಚಾರ ಬಿಜೆಪಿಯೊಳಗೆ ಭಾರಿ ಚರ್ಚೆಗೆ ಕಾರಣವಾಗಿದೆ. ಜಿಲ್ಲೆಯಲ್ಲೂ ನಿರೀಕ್ಷೆ ಮೂಡಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422