SHIVAMOGGA LIVE NEWS | 16 APRIL 2023
SHIMOGA : ಟಿಕೆಟ್ ಘೋಷಣೆ ಬೆನ್ನಿಗೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ನಲ್ಲಿ ಅಸಮಾಧಾನ (dissatisfaction) ಭುಗಿಲೆದ್ದಿದೆ. ಕೆಲವರು ಬಂಡಾಯವಾಗಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದು ಕಾಂಗ್ರೆಸ್ ಮುಖಂಡರಿಗೆ ನುಂಗಲಾರದ ತುತ್ತಾಗಿದೆ.
ಮಾಜಿ ಶಾಸಕ ಕರಿಯಣ್ಣ ಅವರ ಮಗ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದೆ. ಇದು ಉಳಿದ ಆಕಾಂಕ್ಷಿಗಳು, ಅವರ ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದೆ. ಈವರೆಗೂ ಆಕಾಂಕ್ಷಿಗಳ್ಯಾರು ಬಹಿರಂಗವಾಗಿ ಅಸಮಾಧಾನ ಹೊರಹಾಕಿಲ್ಲ. ಆದರೆ ಕೆಲವು ಕಾರ್ಯಕರ್ತರು, ಬೆಂಬಲಿಗರು ಸಿಟ್ಟಾಗಿದ್ದಾರೆ (dissatisfaction).
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಟಿಕೆಟ್ ಘೋಷಣೆ ಬಳಿಕ ಸಭೆ
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಹಲವು ಆಕಾಂಕ್ಷಿಗಳಿದ್ದರು. ಎಲ್ಲರು ಟಿಕೆಟ್ ಸಿಗುವ ವಿಶ್ವಾಸದಲ್ಲಿ ಪಕ್ಷದ ಸಂಘಟನೆ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಹಳ್ಳಿ ಹಳ್ಳಿ ಸುತ್ತಿ ಅನ್ಯ ಪಕ್ಷಗಳ ಕಾರ್ಯಕರ್ತರು, ಮುಖಂಡರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುತ್ತಿದ್ದರು. ಇವುಗಳ ಆಧಾರದ ಮೇಲೆ ಪಕ್ಷದ ಹೈಕಮಾಂಡ್ಗೆ ತಮ್ಮ ಹೆಸರು ತಲುಪುವಂತೆ ಲಾಬಿಗಳನ್ನು ಮಾಡಿದ್ದರು. ಶನಿವಾರ ಮಧ್ಯಾಹ್ನ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಟಿಕೆಟ್ ವಂಚಿತ ಆಕಾಂಕ್ಷಿಗಳ ಬೆಂಬಲಿಗರು ಕೆರಳಿದ್ದಾರೆ. ಅಲ್ಲಲ್ಲಿ ಸಭೆಗಳನ್ನು ನಡೆಸಿ ತಮ್ಮ ನಾಯಕರ ಮುಂದಿನ ನಡೆ ಕುರಿತು ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಶಾಸಕರ ಪುತ್ರರಿಗೆ ಒಲಿದ ಅದೃಷ್ಟ, ಯಾರದು? ಮಾಜಿ ಎಂಎಲ್ಎಗಳ್ಯಾರು?
ಕುತೂಹಲ ಕೆರಳಿಸಿದ ಸುದ್ದಿಗೋಷ್ಠಿ
ನಾರಾಯಣ ಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಡೆ ಕ್ಷಣದಲ್ಲಿ ಅವರಿಗೆ ಟಿಕೆಟ್ ಕೈ ತಪ್ಪಿತ್ತು. ಆ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ಬಾರಿ ಕಾಂಗ್ರೆಸ್ ಟಿಕೆಟ್ ವಿಶ್ವಾಸದಲ್ಲಿದ್ದವರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಆದರೆ ಅವರ ಬೆಂಬಲಿಗರು ನಾರಾಯಣ ಸ್ವಾಮಿ ಅವರು ಸ್ವತಂತ್ರವಾಗಿ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅವರ ಮನೆಯಲ್ಲಿ ನಿರಂತರ ಸಭೆಗಳನ್ನು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ನಡುವೆ ಇವತ್ತು ನಾರಾಯಣ ಸ್ವಾಮಿ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ಇದು ಗ್ರಾಮಾಂತರ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಇನ್ನು, ಪಲ್ಲವಿ, ರವಿಕುಮಾರ್ ಸೇರಿದಂತೆ ಉಳಿದಂತೆ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರಲ್ಲು ಅಸಮಾಧಾನವಿದೆ. ಅವರ ನಡೆ ಇನ್ನೂ ನಿಗೂಢವಾಗಿದೆ.