ಶಿವಮೊಗ್ಗ ಲೈವ್.ಕಾಂ | SHIMOGA | 5 ಅಕ್ಟೋಬರ್ 2019

ನೆರೆ ಪರಿಹಾರ ಕುರಿತು ರಾಜ್ಯದ ಬಿಜೆಪಿ ಸಂಸದರು, ಶಾಸಕರು ಒಂದೊಂದು ಹೇಳಿಕೆ ನೀಡುತ್ತಿದ್ದರೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಧ್ವನಿಯೆ ಇಲ್ಲದಂತಾಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್ ಅವರು, ಯಡಿಯೂರಪ್ಪ ಅವರು ರಾಜ್ಯದ ದುರ್ಬಲ ಮುಖ್ಯಮಂತ್ರಿ ಆಗಿದ್ದಾರೆ. ಮೈತ್ರಿ ಸರ್ಕಾರ ಕೆಡವುವಾಗ ಇದ್ದ ಆತುರ ನೆರೆ ಪರಿಹಾರ ವಿತರಿಸುವಾಗ ಕಾಣುತ್ತಿಲ್ಲ. ಯಡಿಯೂರಪ್ಪ ಅವರಿಗೆ ಧ್ವನಿಯೆ ಇಲ್ಲದಂತೆ ಆಗಿದೆ ಎಂದು ಆರೋಪಿಸಿದರು.
ಮೌನವ್ರತದಲ್ಲಿದ್ದ ಪ್ರಧಾನಿ ಬಿಹಾರ ಪರ ಟ್ವೀಟ್
ಉತ್ತರ ಕರ್ನಾಟಕದ ಜನರು ನೆರೆಯಿಂದಾಗಿ ಬೀದಿಗೆ ಬಿದ್ದಿದ್ದಾರೆ. ಆದರೆ ಸಂಸದ ತೇಜಸ್ವಿ ಸೂರ್ಯ ಕೇಂದ್ರದ ನೆರವು ಬೇಡ ಅಂತಾರೆ. ಮತ್ತೊಮ್ಮೆ ಸಂಸದ ಪ್ರತಾಪ್ ಸಿಂಹ ಮೋದಿಯೆ ತಮಗೆ ದೇವರು ಅಂತಾರೆ. ಹೀಗೆ ಬಕೆಟ್ ಹಿಡಿಯುತ್ತಿದ್ದಾರೆ. ಇನ್ನು ಆಂದ್ರದ ವೆಂಕಯ್ಯನಾಯ್ಡು, ತಮಿಳುನಾಡಿನ ನಿರ್ಮಲಾ ಸೀತಾರಾಮನ್, ಕೇರಳದ ರಾಜೀವ್ ಚಂದ್ರಶೇಖರ್ ಅವರನ್ನು ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಿದ್ದಾರೆ. ಅವರಾರು ಕರ್ನಾಟಕದ ಪರವಾಗಿ ಮಾತನಾಡುತ್ತಿಲ್ಲ ಎಂದು ಸುಂದರೇಶ್ ಆರೋಪಿಸಿದರು.
ಈವರೆಗು ಮೌನವ್ರತ ಮಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ ನೆರೆ ಬಂದ ಕೂಡಲೆ ಟ್ವೀಟ್ ಮಾಡಿದ್ದಾರೆ. ನಾಲ್ಕು ದಿನದಲ್ಲೇ ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕ ರಾಜ್ಯಕ್ಕೆ ಪರಿಹಾರ ವಿಳಂಬ ಮಾಡಲಾಗುತ್ತಿದೆ. ಹಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು 18 ರಿಂದ 20 ಗಂಟೆ ಏನು ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರಿಹಾರ ನೀಡುವಲ್ಲಿ ಕೇಂದ್ರ ಮತ್ತು ರಜ್ಯ ಸರ್ಕಾರ ಇನ್ನೂ ವಿಳಂಬ ಧೋರಣೆ ಮುಂದುವರೆದರೆ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಪ್ರಸನ್ನಕುಮಾರ್, ಪ್ರಮುಖರಾದ ವಿಶ್ವನಾಥ್ ಕಾಶಿ, ಚಂದ್ರಭೂಪಾಲ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200