SHIVAMOGGA LIVE NEWS | 25 FEBRUARY 2024
SHIMOGA : ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಐದು ಪ್ರಮುಖ ಸಂಗತಿ ಪ್ರಸ್ತಾಪಿಸಿದರು.
ಡಿಕೆಶಿ ಭಾಷಣದ 5 ಪ್ರಮುಖ ಪಾಯಿಂಟ್
ಗ್ಯಾರಂಟಿ ಯೋಜನೆ ಜಾರಿಯಾಗಿದ್ದು ಜಾತಿ ಮೇಲಲ್ಲ. ನೀತಿ ಮೇಲೆ. ಗ್ಯಾರಂಟಿ, ವಾರಂಟಿ, ಕ್ವಾಲಿಟಿ ಎಲ್ಲವು ನಿರಂತರವಾಗಿರುತ್ತದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಐದು ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಸರ್ಕಾರದವರು ಏನೇ ಟೀಕೆ ಮಾಡಬಹುದು. ನಿಮಗೆ ಓಟು ಹಾಕದಿದ್ದರೇ ಗ್ಯಾರಂಟಿ ನಿಲ್ಲಬಹುದು ಎಂದು ಹೇಳಬಹುದು. ಆದರೆ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿದೆ. ಈ ಐದು ವರ್ಷವಲ್ಲ, ಇನ್ನೊಂದು ಸಲ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಆರಗ ಜ್ಞಾನೇಂದ್ರ 420 ಗ್ಯಾರಂಟಿ ಎಂದು ಕರೆದಿದ್ದಾರೆ. ಆರಗ ಜ್ಞಾನೇಂದ್ರ ನಿನಗೆ ಜ್ಞಾನ ಇದೆಯಾ? ನಿನಗೆ ಇರೋದು ಅರ್ಧ ಜ್ಞಾನ ಮಾತ್ರ. ಅಲ್ಲಮಪ್ರಭುಗಳು ಹೇಳಿದಂತೆ ಕೊಟ್ಟ ಕುದುರೆ ಏರಲಾರದವನು ವೀರನೂ ಅಲ್ಲ, ಶೂರನೂ ಅಲ್ಲ. ಅಧಿಕಾರ ಇದ್ದಾಗ ಏನೂ ಮಾಡದೇ, ಅಧಿಕಾರ ಕಳೆದುಕೊಂಡ ನಂತರ ಜ್ಞಾನೇಂದ್ರ ಹೀಗೆ ಮಾತಾಡುತ್ತಿದ್ದಾರೆ. ಹಾಗಿದ್ದರೆ ಅವರ ಕ್ಷೇತ್ರದಲ್ಲಿನ ಗ್ಯಾರಂಟಿ ಯೋಜನೆ ಫಲಾನುಭವಿಗಳು 420ಗಳೆನ್ನುತ್ತಾರೆಯೆ?
ಇದನ್ನೂ ಓದಿ – ಶಿವಮೊಗ್ಗಕ್ಕೆ ಹತ್ತು ಅಶ್ವಮೇಧ ಬಸ್, ಟೇಪ್ ಕತ್ತರಿಸಿದರು ಡಿಸಿಎಂ
ಅರಣ್ಯ ಭಾಗದಲ್ಲಿರುವ ಬಡವರನ್ನು ಒಕ್ಕಲೆಬ್ಬಿಸುವುದಕ್ಕೆ ಸರ್ಕಾರ ಅವಕಾಶ ಕೊಡುವುದಿಲ್ಲ. ಎಲ್ಲ ಸಾಗುವಳಿದಾರರಿಗೂ 25 ವರ್ಷದ ಮಿತಿಯೊಳಗೆ ಅರಣ್ಯ ಹಕ್ಕು ನೀಡಲು ಹಾಗೂ ಶರಾವತಿ ಮುಳುಗಡೆ ಸಂತ್ರಸ್ತರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ.
ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಪ್ರತಿ ಎರಡು ಮೂರು ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ತೀರ್ಮಾನಿಸಿದೆ. ಪ್ರತಿ ಶಾಲೆಗೆ 5 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.
ಅರ್ಚಕರ ಪ್ರಭಾವದಿಂದ ನಾವು ಶಿಲೆಯಲ್ಲೂ ಶಿವನ ಕಾಣುತ್ತೇವೆ. ಹೀಗಾಗಿ ದೊಡ್ಡ ದೇವಾಲಯಗಳ ಆದಾಯದಲ್ಲಿ ಶೇ 10ರಷ್ಟು ತೆಗೆದುಕೊಂಡು ಅದನ್ನು ಅರ್ಚಕರ ವೇತನ, ವಿಮೆ ಹಾಗೂ ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡಲು ಮುಂದಾಗಿದ್ದೆವು. ದೇವಾಲಯ, ಧರ್ಮದ ಬಗ್ಗೆ ಮಾತನಾಡುವ ಬಿಜೆಪಿ ಹಾಗೂ ಜೆಡಿಎಸ್ನವರು ಸೇರಿ ಆ ಮಸೂದೆಯನ್ನು ವಿಧಾನಪರಿಷತ್ತಿನಲ್ಲಿ ಸೋಲಿಸಿದ್ದಾರೆ. ಇನ್ನು ಮೂರು ತಿಂಗಳಲ್ಲಿ ನಾವು ಮೇಲ್ಮನೆಯಲ್ಲಿ ಬಹುಮತ ಪಡೆಯುತ್ತೇವೆ. ಆಗ ಮಸೂದೆ ಜಾರಿಯಾಗುವಂತೆ ಮಾಡುತ್ತೇವೆ.
ಇದನ್ನೂ ಓದಿ – ಗ್ಯಾರಂಟಿ ಸಮಾವೇಶ, ಮಹಿಳೆಯರ ಭರ್ಜರಿ ಡಾನ್ಸ್, ಪುನೀತ್ಗೆ ಟಾರ್ಚ್ ಲೈಟ್ ಸಲ್ಯೂಟ್, ಸ್ಥಳದಲ್ಲೇ ಯೋಜನೆಗೆ ನೋಂದಣಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200