ಶಿವಮೊಗ್ಗ ಚುನಾವಣೆಯ ಉಸ್ತುವಾರಿಯನ್ನು ಡಿಕೆಶಿ ಅವರಿಗೆ ವಹಿಸಿಲ್ಲ, ಮಾಜಿ ಸಚಿವರಿಗೆ ನೀಡಿದ್ದೇವೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | 11 ಏಪ್ರಿಲ್ 2019

ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಚುನಾವಣೆ ಉಸ್ತುವಾರಿಯನ್ನು ನೀಡಿಲ್ಲ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರೇ ಚುನಾವಣೆಯ ಉಸ್ತುವಾರಿ ಅಂತಾ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಪಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬಳ್ಳಾರಿ ಉಸ್ತುವಾರಿ ವಹಿಸಿದ್ದೇವೆ. ಹಾಗಾಗಿ ಕಿಮ್ಮನೆ ರತ್ನಾಕರ್ ಅವರಿಗೆ ಶಿವಮೊಗ್ಗದ ಹೊಣೆಗಾರಿಕೆ ನೀಡಿದ್ದೇವೆ ಎಂದರು.

ಇದೇನು ಪಾಕಿಸ್ತಾನದ ಚುನಾವಣೆನಾ?

ಐದು ವರ್ಷದಲ್ಲಿ ಯಾವುದೇ ಸಾಧನೆ ತೋರದ ಪ್ರಧಾನಿ ನರೇಂದ್ರ ಮೋದಿ, ಈಗ ಪ್ರತಿ ಭಾಷಣದಲ್ಲೂ ಪಾಕಿಸ್ತಾನವನ್ನು ಪ್ರಸ್ತಾಪಿಸುತ್ತಿದ್ದಾರೆ. ಇದೇನು ಹಿಂದುಸ್ಥಾನದ ಚುನಾವಣೆಯೋ, ಪಾಕಿಸ್ತಾನದ ಚುನಾವಣೆಯೋ ಅಂತಾ ಪ್ರಶ್ನಿಸಿದ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಗೆದ್ದರೆ ಪಾಕಿಸ್ತಾನದಲ್ಲಿ ಸಂಭ್ರಮಿಸುತ್ತಾರೆ ಅಂತಾ ಮೋದಿ ಹೇಳುತ್ತಿದ್ದಾರೆ. ಆದರೆ ಪಾಕಿಸ್ತಾನದ ಪ್ರಧಾನಿಯೇ ಮೋದಿ ಗೆದ್ದರೆ ನಮಗೆ ಖುಷಿ ಅಂತಾ ಹೇಳಿಕೆ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು.

56742527 822660644762024 4455076147717210112 n.jpg? nc cat=109& nc oc=AQnIugUSH0eeZcDdRR0vynkGuocDRVJ0IwAKI50iPxJOg 2mSnMaG7IYjg7NZ7e KhmrSi5OjENDYaF2v8mFYHY7& nc ht=scontent.fixe1 1

ಮೋದಿ ಜೈಲಿಗೆ ಹೋಗೋದು ನಿಶ್ಚಿತ

ರಫೇಲ್ ಯುದ್ಧ ವಿಮಾನ ಖರೀದಿ ಹಗರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜೈಲಿಗೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ ಅಂತಾ ದಿನೇಶ್ ಗುಂಡೂರಾವ್ ಭವಿಷ್ಯ ನುಡಿದಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಮರು ಪರಿಶೀಲನಾ ಅರ್ಜಿ ವಿಚಾರಣೆಗಾಗಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಆ ಮೂಲಕ ವಿಚಾರಣೆಗೆ ಅಂಗೀಕರಿಸುವಂತಾಗಿದ್ದು, ಪ್ರಕರಣ ಮತ್ತೆ ತೆರೆದುಕೊಳ್ಳಲಿದೆ ಎಂದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ, ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment