SHIVAMOGGA LIVE NEWS | SHIMOGA FM | 22 ಏಪ್ರಿಲ್ 2022
ರಾಜ್ಯದ ಜನರೆ ಬಿಜೆಪಿ ಸರ್ಕಾರವನ್ನು ಬುಲ್ಡೋಜರ್ ಮಾಡಿ, ಕಿತ್ತೊಗೆಯುತ್ತಾರೆ. ಕಾನೂನು ಗೊತ್ತಿಲ್ಲದ ಬಡವರ ಮನೆಗಳ ಮೇಲೆ ಬುಲ್ಡೋಜರ್ ಹಾಯಿಸುತ್ತೇವೆ ಎಂದು ರಾಜ್ಯದ ಸಚಿವರು ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಈಗ ಆ ಪಕ್ಷದ ನಾಯಕರು ಬುಲ್ಡೋಜರ್ ರಸ್ತೆಗಿಳಿಸುವ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರದಲ್ಲಿನ ಹಗರಣಗಳಿಂದಾಗಿ ರಾಜ್ಯದ ಜನರೆ ಬಿಜೆಪಿ ಪಕ್ಷವನ್ನು ಬುಲ್ಡೋಜರ್ ಮಾಡುತ್ತಾರೆ ಎಂದರು.
ಈಶ್ವರಪ್ಪ ವಿರುದ್ಧ ಆಕ್ರೋಶ
ಬಿಜೆಪಿ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಇದೆ. ಒಬ್ಬೊಬ್ಬರಾಗಿ ಹೊರಗೆ ಬಂದು ತಮ್ಮ ನೋವು ಹೇಳಿಕೊಳ್ಳುತ್ತಿದ್ದಾರೆ. ಸಂತೋಷ್ ಪಾಟೀಲ್ ಅವರು 40 ಪರ್ಸೆಂಟ್ ಕಮಿಷನ್ ವಿಚಾರವಾಗಿ ದೆಹಲಿವರೆಗೆ ತೆರಳಿದ್ದರು. ಬಿಜೆಪಿ ಮುಖಂಡರಿಗೆ ದೂರ ನೀಡಿದ್ದರು. ಸಂತೋಷ್ ಪಾಟೀಲ್ ಕೆಲಸ ಮಾಡಿದ್ದಾರೆ ಎಂದು ಆ ಭಾಗದ ಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಈಶ್ವರಪ್ಪ ಅವರು ಸಂತೋಷ್ ಪಾಟೀಲ್ ಯಾರೆಂದು ಗೊತ್ತಿಲ್ಲ ಎನ್ನುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಮಾನ ನಿಲ್ದಾಣ ಮಾಡಿದರೇನು ಉಪಯೋಗ?
ಹರ್ಷ ಹತ್ಯೆ ನಂತರ ಶಿವಮೊಗ್ಗ ನಗರದಲ್ಲಿ ದಾಂಧಲೆ, ಲೂಟಿ ನಡೆಯಿತು. ಈಶ್ವರಪ್ಪ ಅವರ ನೇತೃತ್ವದಲ್ಲಿಯೆ ಇಷ್ಟೆಲ್ಲ ನಡೆದರೂ ಪ್ರಕರಣ ದಾಖಲಾಗಲಿಲ್ಲ. ಶಿವಮೊಗ್ಗದ ಜಿಲ್ಲಾ ರಕ್ಷಣಾಧಿಕಾರಿ ಈ ಕುರಿತು ಕ್ರಮ ಕೈಗೊಳ್ಳದಿರುವುದು ಏಕೆ. ವಿಮಾನ ನಿಲ್ದಾಣ ನಿರ್ಮಾಣ ಮಾಡಿ, ಹೈಟೆಕ್ ನಗರ ರೂಪಿಸಿದ್ದೇವೆ ಅನ್ನುತ್ತಾರೆ. ಗಲಭೆಗಳಿದ್ದಾಗ ಹೂಡಿಕೆದಾರರು ಬರುತ್ತಾರೆಯೇ. ಮಂಗಳೂರಿನಲ್ಲಿ ಇದೆ ರೀತಿ ಆಗಿದ್ದು, ಜನರು ಉದ್ಯೋಗಕ್ಕಾಗಿ ಮುಂಬೈ, ಬೆಂಗಳೂರು, ದುಬೈಗೆ ತೆರಳುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ರಾಜ್ಯದಲ್ಲಿ ಯಾವುದೆ ಅವ್ಯವಹಾರ, ವಿವಾದ ಕೇಳಿ ಬಂದರು ಸರ್ಕಾರ ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತದೆ. ನಮ್ಮಪಕ್ಷದ ಹೆಸರು ಬಳಕೆ ಮಾಡದಿದ್ದರೆ ಬಿಜೆಪಿಯ ರಾಜಕಾರಣ ನಡೆಯುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ | ಹತ್ಯೆಯಾದವರ ಕುಟುಂಬಕ್ಕೆ ಪರಿಹಾರದ ವಿಚಾರದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದಕ್ಕೆ ಸುಣ್ಣ