SHIVAMOGGA LIVE NEWS | 8 FEBRURARY 2023
BHADRAVATHI : ಬಿಜೆಪಿ ಅಧಿಕಾರಕ್ಕೆ ಬಂದರೆ ವಿಐಎಸ್ಎಲ್ (VISL) ಉಳಿಸಿಕೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದರು. ಅವರು ಮಾತು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಭಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಹೇಗಾದರು ಮಾಡಿ ಉಳಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಭದ್ರಾವತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್ (DK Shivakumar) ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. ಭದ್ರಾವತಿಯ ವಿಐಎಸ್ಎಲ್ ಮತ್ತು ಎಂಪಿಎಂ (MPM) ಕಾರ್ಖಾನೆಯನ್ನು ಹೇಗಾದರು ಮಾಡಿ ಉಳಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.
ಯಡಿಯೂರಪ್ಪ ಅವರು ವಿಐಎಸ್ಎಲ್ (VISL) ಕಾರ್ಖಾನೆ ಉಳಿಸಿಕೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಮಾತು ತಪ್ಪಿದ್ದಾರೆ. ಈ ಭಾರಿ ಮತ ಕೇಳಲು ಜನರ ಬಳಿಗೆ ಹೋಗಲು ಅವರಿಗೆ ನೈತಿಕತೆ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ವಿಐಎಸ್ಎಲ್ ಗೇಕೆ ಅನುದಾನವಿಲ್ಲ?
ವಿಐಎಸ್ಎಲ್ ಗಾಗಿ ಸಿದ್ದರಾಮಯ್ಯ ಅವರು ಗಣಿ ಮಂಜೂರು ಮಾಡಿಸಿದರು. ಅದನ್ನು ಜಾರಿಗೊಳಿಸದಿರಲು ಕಾರಣವೇನು. ಬಿಜೆಟ್ ನಲ್ಲಿ ಹಲವು ಕಾರ್ಖಾನೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ. ಆದರೆ ರಾಜ್ಯದ ವಿಐಎಸ್ಎಲ್ ಗೆ ಏಕೆ ಹಣ ಘೋಷಣೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಇವತ್ತಿನ ಟಾಪ್ 8 ನ್ಯೂಸ್ | ಓದಲು ಇಲ್ಲಿ ಕ್ಲಿಕ್ ಮಾಡಿ
ತಲೆ ಮೇಲಿಟ್ಟಿದ್ದಾರೆ ತುಪ್ಪ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರು ಮೂಗಿಗೆ ತುಪ್ಪ ಸವರಿಲ್ಲ. ಬದಲಾಗಿ ತಲೆ ಮೇಲೆ ತುಪ್ಪ ಇಟ್ಟು ವಾಸನೆಯನ್ನಷ್ಟೆ ತೋರಿಸುತ್ತಿದ್ದಾರೆ. ಚುನಾವಣೆ ಸಂದರ್ಭ ಮೂವರು ಸಚಿವರನ್ನು ಕಾರ್ಖಾನೆಗೆ ಕರೆತಂದು ಭಾಷಣ ಮಾಡಿಸಿದರು. ಒಬ್ಬ ಮಂತ್ರಿ 1 ಸಾವಿರ ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದ್ದರು. ಮತ್ತೊಬ್ಬ ಮಂತ್ರಿ 6 ಸಾವಿರ ಕೋಟಿ ರೂ. ಹೂಡಿಕೆ ಅಂದರು. ಇದು ಕೂಡ ಜಾರಿಯಾಗಲಿಲ್ಲ. ಈಗ ಪ್ರಜ್ಞಾವಂತ ಮತದಾರರು ಇದಕ್ಕೆ ಉತ್ತರ ಕೊಡಬೇಕಿದೆ ಎಂದರು.
15 ಲಕ್ಷ ಕೋಟಿ ಹೂಡಿಕೆ ಪಟ್ಟಿ ಕೊಡಿ
ಸಂಜೆ 6 ಗಂಟೆಯಾದರೆ ಇಲ್ಲಿ ಅಂಗಡಿ ಮುಂಗಟ್ಟು ಮುಚ್ಚಿಸಲಾಗುತ್ತಿದೆ. ಹಾಗಿದ್ದಾಗ ಹೂಡಿಕೆ ಮಾಡಲು ಯಾರು ಬರುತ್ತಾರೆ. ಉಡುಪಿ, ಮಂಗಳೂರು, ಶಿವಮೊಗ್ಗದಲ್ಲಿ 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಇಲ್ಲಿ ಎಷ್ಟು ಲಕ್ಷ ಕೋಟಿ ರೂ. ಹೂಡಿಕೆಯಾಗಿದೆ, ಯಾವೆಲ್ಲ ಯೋಜನೆ ಪ್ರಾರಂಭವಾಗಿದೆ ಎಂದು ಯಡಿಯೂರಪ್ಪ, ಈಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ ಅವರು ಪಟ್ಟಿ ಬಿಡುಗಡೆ ಮಾಡಬೇಕು ಎಂದು ಸವಾಲು ಹಾಕಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ 620 ಮನೆಗಳ ಹಂಚಿಕೆ, ಸೌಲಭ್ಯವಿಲ್ಲದ್ದಕ್ಕೆ ಕಾಂಗ್ರೆಸ್ ಪಕ್ಷ ಗರಂ, ಮಾಜಿ ಎಂಎಲ್ಎ ಆರೋಪಗಳೇನು?
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಹ್ಯಾರಿಸ್ ಸೇರಿದಂತೆ ಹಲವು ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200