ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಫೆ.19ರಂದು ಮಧ್ಯಾಹ್ನ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ದ್ವಾರಕಾ ಕನ್ವೆಷನ್ ಹಾಲ್’ನಲ್ಲಿ ಪಕ್ಷದ ಜಿಲ್ಲಾ ಸಮಿತಿಯ ಡಿಜಿಟಲ್ ಸದಸ್ಯತ್ವ ಅಭಿಯಾನ ನಡೆಯಲಿದೆ. ಇದಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ ಎಂದರು.
ಡಿ.ಕೆ.ಶಿವಕುಮಾರ್ ಅವರು ಫೆ.19ರಂದು ಮಧ್ಯಾಹ್ನ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಅವರು ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಇದನ್ನೂ ಓದಿ | ‘ಸಚಿವ ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ, ಬಂಧಿಸಬೇಕು’






