ಶಿವಮೊಗ್ಗಕ್ಕೆ ಇವತ್ತು ಡಿ.ಕೆ.ಶಿವಕುಮಾರ್ ಭೇಟಿ, ಎಲ್ಲೆಲ್ಲಿ ಕಾರ್ಯಕ್ರಮ ನಿಗದಿಯಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇವತ್ತು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಸಾಗರ, ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿ ಅವರು ವಾಸ್ತವ್ಯ ಮಾಡಲಿದ್ದಾರೆ. (DK shivakumar visit to shimoga)

Shimoga Nanjappa Hospital

(DK shivakumar visit to shimoga)

ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ?

ಡಿ.ಕೆ.ಶಿವಕುಮಾರ್ ಅವರು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ. 11.30ಕ್ಕೆ ಸಾಗರಕ್ಕೆ ಆಗಮಿಸಲಿದ್ದಾರೆ. ತ್ಯಾಗರ್ತಿ ಹೋಬಳಿಯ ಹುತ್ತದಿಂಬ ಗ್ರಾಮದ ಕಾರ್ಯಕರ್ತ ರಮೇಶ್ ಅವರ ಮನೆಗೆ ತೆರಳಲಿದ್ದಾರೆ. ಹಿರಿಯೂರಿನಲ್ಲಿ ನಡೆಯುತ್ತಿದ್ದ ಭಾರತ್ ಜೋಡೋ ಯಾತ್ರೆಗೆ ತೆರಲಿದ್ದ ರಮೇಶ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವತ್ತು ಕುಟುಂಬಕ್ಕೆ ಸಾಂತ್ವನ ಹೇಳಲು ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡುತ್ತಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಸಾಗರದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. ಸಂಜೆ 5.30ಕ್ಕೆ ಭದ್ರಾವತಿಗೆ ತೆರಳಲಿದ್ದಾರೆ. ಶಾಸಕ ಸಂಗಮೇಶ್ವರ್ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಭದ್ರಾವತಿಗೆ ಸಿದ್ದರಾಮಯ್ಯ ಭೇಟಿ, ಶಿವಮೊಗ್ಗದಲ್ಲಿ ವಾಸ್ತವ್ಯ, ಎಲ್ಲಿಗೆಲ್ಲ ತೆರಳಲಿದ್ದಾರೆ?

ರಾತ್ರಿ 8.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಲ್ಲಿಯೆ ವಾಸ್ತವ್ಯ ಮಾಡಲಿದ್ದಾರೆ. ಅ.29ರಂದು ಬೆಳಗ್ಗೆ 9.30ಕ್ಕೆ           ಹೆಲಿಕಾಪ್ಟರ್ ಮೂಲಕ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

ADVERTISEMENT (DK shivakumar visit to shimoga)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 28, 2022

Leave a Comment