‘ಹಳೆ ಪಿಂಚಣಿ ಯೋಜನೆ ರದ್ದುಗೊಳಿಸಿದವರಿಗೆ ತಕ್ಕ ಪಾಠ ಕಲಿಸಲಿದ್ದಾರೆʼ

SHIVAMOGGA LIVE NEWS | 18 APRIL 2024

SHIMOGA : ಹಳೆ ಪಿಂಚಣಿ (ಒಪಿಎಸ್‌) ರದ್ದುಗೊಳಿಸಿ ಹೊಸ ಪಿಂಚಣಿ (ಎನ್‌ಪಿಎಸ್‌) ಜಾರಿಗೊಳಿಸಿದ್ದೆ ಬಿಜೆಪಿ – ಜೆಡಿಎಸ್‌ ಸಮ್ಮಿಶ್ರ ಸರ್ಕಾರ. ಮುಂಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಕೆ. ಮಂಜುನಾಥ ಹೇಳಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್‌, ರಾಜ್ಯದಲ್ಲಿ 2006ರಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಆಡಳಿತದಲ್ಲಿತ್ತು. ಆಗ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. ಶಿಕ್ಷಕರಿಗೆ ತಪ್ಪು ಮಾಹಿತಿ ನೀಡಿ ಅನುಷ್ಠಾನ ಮಾಡಲಾಗಿದೆ. ಇವರಿಗೆ ಶಿಕ್ಷಕರು ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದು ತಿಳಿಸಿದರು. 

ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು. ಶಿಕ್ಷಕರಿಗೆ ಬಡ್ತಿಯಲ್ಲಿ ಆಗುತ್ತಿರು ಅನ್ಯಾಯ ಸರಿ ಹೋಗಬೇಕು. ಕಾಂಗ್ರೆಸ್‌ ಸರ್ಕಾರ ಆಡಳಿತದಲ್ಲಿ ಇದೆ. ಸರ್ಕಾರದ ಮೇಲೆ ಒತ್ತಡ ಹೇರಿ ಸೌಲಭ್ಯ ಕಲ್ಪಿಸಲು ಪ್ರಯತ್ನಿಸುತ್ತೇನೆ ಎಂದರು.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಮೊಳಗಿತು ಜೈ ಶ್ರೀರಾಮ್‌ ಘೋಷಣೆ, ಎಲ್ಲೆಲ್ಲಿ ಹೇಗಿತ್ತು ರಾಮನವಮಿ ಪೂಜೆ?

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : April 18, 2024 at 12:30 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಏಪ್ರಿಲ್ 18, 2024

Leave a Comment