SHIVAMOGGA LIVE NEWS | 26 MAY 2024
ELECTION NEWS : ವಿಧಾನ ಪರಿಷತ್ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆ ಪ್ರಚಾರ (Campaign) ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತದಾರರನ್ನು ಭೇಟಿಯಾಗಿ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಇನ್ನೊಂದೆಡೆ ಅವರ ಪತ್ನಿ ನಮಿತಾ ಸರ್ಜಿ ಕೂಡ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ.
ಡಾ. ಸರ್ಜಿ ಬಿರುಸಿನ ಪ್ರಚಾರ
ಉಡುಪಿ ಜಿಲ್ಲೆ ಕಾಪುವಿನಲ್ಲಿ ಬಿಜೆಪಿ ಪ್ರಮುಖರು, ಮಹಾಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆಯಲ್ಲಿ ಡಾ. ಧನಂಜಯ ಸರ್ಜಿ ಭಾಗವಹಿಸಿದ್ದರು. ಶಾಸಕರಾದ ಯಶ್ ಪಾಲ್ ಸುವರ್ಣ, ಗುರುಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಸೇರಿದಂತೆ ಹಲವರು ಇದ್ದರು. ಬಳಿಕ ಉಡುಪಿ ಜಿಲ್ಲೆಯ ವಿವಿಧೆಡೆ ಡಾ. ಧನಂಜಯ ಸರ್ಜಿ ಮತಯಾಚಿಸಿದರು.
ಪ್ರಚಾರದ ಅಖಾಡಕ್ಕೆ ಸರ್ಜಿ ಪತ್ನಿ
ಡಾ. ಧನಂಜಯ ಸರ್ಜಿ ಪತ್ನಿ ನಮಿತಾ ಸರ್ಜಿ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಮತದಾರರನ್ನು ಭೇಟಿಯಾಗಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಶನಿವಾರ ಭದ್ರಾವತಿ ತಾಲೂಕು ಬಿ.ಆರ್.ಪ್ರಾಜೆಕ್ಟ್‌ನ ತಮ್ಮಡಿಹಳ್ಳಿಯ ಸ್ಪಂದನಾ ಶಾಲೆಯಲ್ಲಿ ಮತಯಾಚನೆ ಮಾಡಿದರು. ಶಿವಮೊಗ್ಗದ 8ನೇ ವಾರ್ಡ್‌ನಲ್ಲಿ ಪದವೀಧರನ್ನು ಭೇಟಿಯಾದ ನಮಿತಾ ಸರ್ಜಿ, ಮತಯಾಚಿಸಿದರು.
ಬಿಜೆಪಿ ಮುಖಂಡರಿಂದ ಸಭೆ, ಪ್ರಚಾರ
ಇನ್ನೊಂದೆಡೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಶಿವಮೊಗ್ಗ ನಗರದ ವಿವಿಧೆಡೆ ಸಾಲು ಸಾಲು ಸಭೆಗಳನ್ನು ನಡೆಸಿದರು. ಪದವೀಧರರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಬೋಜೇಗೌಡ ಪರವಾಗಿ ಮತಯಾಚಿಸುವಂತೆ ಮುಖಂಡರು, ಕಾರ್ಯಕರ್ತರಿಗೆ ಸೂಚಿಸಿದರು.
ಇದನ್ನೂ ಓದಿ – ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಬಿಜೆಪಿ ಕಾರ್ಯಾಲಯದಲ್ಲಿ ನೈಋತ್ಯ ಪದವೀಧರರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಪೂರ್ವಭಾವಿಯಾಗಿ ಚುನಾವಣ ಸಂಚಾಲಕರು, ಪ್ರಮುಖರ ಸಭೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಭಾರತಿ ಶೆಟ್ಟಿ, ಮಾಜಿ ಶಾಸಕರಾದ ಎಂ.ಬಿ ಭಾನುಪ್ರಕಾಶ್, ಕೆ.ಜಿ ಕುಮಾರಸ್ವಾಮಿ ಹಾಗೂ ಜಿಲ್ಲಾ ಪ್ರದಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಮುಖರು, ಮಂಡಲ ಅಧ್ಯಕ್ಷರುಗಳು, ಪ್ರದಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200