‘ಡಾ.ಧನಂಜಯ ಸರ್ಜಿ ಗೆಲುವು ನಿಶ್ಚಿತ’, ನಾಮಪತ್ರ ಸಲ್ಲಿಕೆ ದಿನಾಂಕ ಫಿಕ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 MAY 2024

SHIMOGA : ಕಳೆದ ಆರು ಅವಧಿ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳೆ ಗೆಲುವು ಸಾಧಿಸಿದ್ದಾರೆ. ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಗೆಲ್ಲಲ್ಲಿದ್ದಾರೆ. ಮೇ 16ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್‌, ಆರ್‌ಎಸ್‌ಎಸ್‌ ಸ್ವಯಂ ಸೇವಕ, ಸಾಮಾಜಿಕ ಚಟುವಟಿಕೆ, ವೈದ್ಯರಾಗಿ ಡಾ. ಧನಂಜಯ ಸರ್ಜಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಕೇಂದ್ರಿಯ ಸಮಿತಿ ಡಾ. ಧನಂಜಯ ಸರ್ಜಿ ಅವರ ಹೆಸರನ್ನು ನೈಋತ್ಯ ಪದವೀಧರ ಕ್ಷೇತ್ರಕ್ಕೆ ಆಯ್ಕೆ ಮಾಡಿದೆ. ಮೇ 16ರಂದು ಪಕ್ಷದ ಹಿರಿಯರೊಂದಿಗೆ ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಾರಿಯು ಬಿಜೆಪಿ ಅಭ್ಯರ್ಥಿಯೆ ಗೆಲ್ಲಲಿದ್ದಾರೆ ಎಂದು ತಿಳಿಸಿದರು.

1988ರಲ್ಲಿ ನೈಋತ್ಯ ಪದವೀಧರ ಕ್ಷೇತ್ರ ಸ್ಥಾಪಿಸಲಾಯಿತು. ಮೊದಲ ಚುನಾವಣೆಯಲ್ಲಿ ಡಿ.ಹೆಚ್.ಶಂಕರಮೂರ್ತಿ ಅವರು ಸ್ಪರ್ಧಿಸಿ ಗೆದ್ದಿದ್ದರು. ಈ ಕ್ಷೇತ್ರಕ್ಕೆ ಆರು ಬಾರಿ ಚುನಾವಣೆಯಾಗಿದ್ದು ಆರು ಬಾರಿಯು ಬಿಜೆಪಿ ಅಭ್ಯರ್ಥಿಗಳೆ ಗೆದ್ದಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿದ್ದಾರೆ. ಒಟ್ಟು 81,750 ಮತದಾರರು ನೋಂದಾಯಿಸಿಕೊಂಡಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ 30 ವಿಧಾನಸಭೆ ಕ್ಷೇತ್ರದಲ್ಲಿ 15 ಶಾಸಕರು ಬಿಜೆಪಿಯವರು. ಇನ್ನು, ಲೋಕಸಭೆ ಚುನಾವಣೆ ಸಂದರ್ಭದಲ್ಲು ಬಿಜೆಪಿ ಕಾರ್ಯಕರ್ತರು ನೋಂದಾಯಿತ ಮತದಾರರ ಜೊತೆ ಸಂಪರ್ಕದಲ್ಲಿದ್ದರು. ಈ ಆಧಾರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಗೆಲ್ಲಲಿದ್ದಾರೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ, ಶಾಸಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 13, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment