ಕಾಂಗ್ರೆಸ್‌ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ದಿಢೀರ್‌ ಬಿಜೆಪಿ ಸೇರ್ಪಡೆ, ಕಾರಣವೇನು? ಮುಂದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 APRIL 2023

SAGARA / BENGALURU : ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಡಾ.ರಾಜನಂದಿನಿ ಅವರು ಬಿಜೆಪಿ ಸದಸ್ಯತ್ವ (Join BJP) ಪಡೆದರು.

Dr-rajanandini-Joins-BJp-in-Bangalore

ಡಾ.ರಾಜನಂದಿನಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದರು. ಅವರೊಂದಿಗೆ ಚರ್ಚೆ ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಡಾ.ರಾಜನಂದಿನಿ ಅವರೊಂದಿಗೆ ಹೊನಗೋಡು ರತ್ನಾಕರ್‌ ಅವರು ಇದ್ದರು.

ಟಿಕೆಟ್‌ ಆಕಾಂಕ್ಷಿಯಾಗಿದ್ದರು

ಡಾ.ರಾಜನಂದಿನಿ ಅವರು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅಲ್ಲದೆ ಸಾಗರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಈ ಬಾರಿ ಕಾಂಗ್ರೆಸ್‌ ಪಕ್ಷ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ  ಅವರಿಗೆ ಟಿಕೆಟ್‌ ನೀಡಿದೆ. ಇದರಿಂದ ಬೇಸರಗೊಂಡಿರುವ ಡಾ.ರಾಜನಂದಿನಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ  (Join BJP).

ಗುರುತಿಸಲಿಲ್ಲ, ಟಿಕೆಟ್‌ ಕೊಡಲಿಲ್ಲ

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಾ.ರಾಜನಂದಿನಿ ಅವರು, ʼಕಾಂಗ್ರೆಸ್‌ ಪಕ್ಷ ನನ್ನನ್ನು ಗುರುತಿಸಲಿದೆ. ನನಗೆ ಟಿಕೆಟ್‌ ನೀಡಲಿದೆ ಎಂದು ನಂಬಿದ್ದೆ. ಆದರೆ ನನಗೆ ಅವಕಾಶ ಸಿಗಲಿಲ್ಲ. ಬಿಜೆಪಿಯವರು ತನ್ನನ್ನು ಉತ್ತಮವಾಗಿ ಸ್ವಾಗತಿಸಿದ್ದಾರೆ. ಪಕ್ಷ ಎಲ್ಲಿಯೇ ಕೆಲಸ ಮಾಡುವಂತೆ ಸೂಚಿಸಿದರೂ ಮಾಡುತ್ತೇನೆʼ ಎಂದರು.

ಇದನ್ನೂ ಓದಿ – ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ರಸ್ತೆ ತಡೆ, ಟೈರ್‌ಗೆ ಬೆಂಕಿ ಹಚ್ಚಲು ಯತ್ನ, ವಿವಿಧ ಜವಾಬ್ದಾರಿಗೆ ರಾಜೀನಾಮೆ

ʼಸೂಕ್ತ ಸ್ಥಾನಮಾನ ನೀಡಲಾಗುತ್ತದೆʼ

ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಅಪರೂಪದ ರಾಜಕಾರಣಿ, ಸಮಾಜವಾದಿ ಹಿನ್ನಲೆಯ ಕಾಗೋಡು ತಿಮ್ಮಪ್ಪ ಅವರ ಮಗಳು ಡಾ.ರಾಜನಂದಿನಿ ಇವತ್ತು ಕಾಂಗ್ರೆಸ್‌ ಪಕ್ಷದ ಸ್ಥಾನಮಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಹಿಂದುಳಿದ ವರ್ಗದ ಡಾ.ರಾಜನಂದಿನಿ ವೃತ್ತಿಯಲ್ಲಿ ವೈದ್ಯರು. ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದರು. ಇವರು ಬಿಜೆಪಿ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಸಾಕಷ್ಟು ಬಲ ಬಂದಿದೆ. ಸೊರಬ, ಸಾಗರ ಸೇರಿ ಶಿವಮೊಗ್ಗ ಜಿಲ್ಲೆಯಲ್ಲಿ ಇವರ ಸೇರ್ಪಡೆಯಿಂದ ಎಲ್ಲರೂ ಗೆಲ್ಲಲು ದೊಡ್ಡ ಶಕ್ತಿ ತುಂಬಿದಂತಾಗಿದೆ. ನಮ್ಮ ಸರ್ಕಾರ ಬಂದಾಗ ಅವರಿಗೂ ಸೂಕ್ತ ಸ್ಥಾನಮಾನ ಕೊಡಲು ತೀರ್ಮಾನಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 12, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment