ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 APRIL 2023
SAGARA / BENGALURU : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಡಾ.ರಾಜನಂದಿನಿ ಅವರು ಬಿಜೆಪಿ ಸದಸ್ಯತ್ವ (Join BJP) ಪಡೆದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಡಾ.ರಾಜನಂದಿನಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದರು. ಅವರೊಂದಿಗೆ ಚರ್ಚೆ ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಡಾ.ರಾಜನಂದಿನಿ ಅವರೊಂದಿಗೆ ಹೊನಗೋಡು ರತ್ನಾಕರ್ ಅವರು ಇದ್ದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಟಿಕೆಟ್ ಆಕಾಂಕ್ಷಿಯಾಗಿದ್ದರು
ಡಾ.ರಾಜನಂದಿನಿ ಅವರು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅಲ್ಲದೆ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಈ ಬಾರಿ ಕಾಂಗ್ರೆಸ್ ಪಕ್ಷ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಬೇಸರಗೊಂಡಿರುವ ಡಾ.ರಾಜನಂದಿನಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ (Join BJP).
ಗುರುತಿಸಲಿಲ್ಲ, ಟಿಕೆಟ್ ಕೊಡಲಿಲ್ಲ
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಾ.ರಾಜನಂದಿನಿ ಅವರು, ʼಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಲಿದೆ. ನನಗೆ ಟಿಕೆಟ್ ನೀಡಲಿದೆ ಎಂದು ನಂಬಿದ್ದೆ. ಆದರೆ ನನಗೆ ಅವಕಾಶ ಸಿಗಲಿಲ್ಲ. ಬಿಜೆಪಿಯವರು ತನ್ನನ್ನು ಉತ್ತಮವಾಗಿ ಸ್ವಾಗತಿಸಿದ್ದಾರೆ. ಪಕ್ಷ ಎಲ್ಲಿಯೇ ಕೆಲಸ ಮಾಡುವಂತೆ ಸೂಚಿಸಿದರೂ ಮಾಡುತ್ತೇನೆʼ ಎಂದರು.
ಇದನ್ನೂ ಓದಿ – ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ರಸ್ತೆ ತಡೆ, ಟೈರ್‌ಗೆ ಬೆಂಕಿ ಹಚ್ಚಲು ಯತ್ನ, ವಿವಿಧ ಜವಾಬ್ದಾರಿಗೆ ರಾಜೀನಾಮೆ
ʼಸೂಕ್ತ ಸ್ಥಾನಮಾನ ನೀಡಲಾಗುತ್ತದೆʼ
ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅಪರೂಪದ ರಾಜಕಾರಣಿ, ಸಮಾಜವಾದಿ ಹಿನ್ನಲೆಯ ಕಾಗೋಡು ತಿಮ್ಮಪ್ಪ ಅವರ ಮಗಳು ಡಾ.ರಾಜನಂದಿನಿ ಇವತ್ತು ಕಾಂಗ್ರೆಸ್ ಪಕ್ಷದ ಸ್ಥಾನಮಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಹಿಂದುಳಿದ ವರ್ಗದ ಡಾ.ರಾಜನಂದಿನಿ ವೃತ್ತಿಯಲ್ಲಿ ವೈದ್ಯರು. ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದರು. ಇವರು ಬಿಜೆಪಿ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಸಾಕಷ್ಟು ಬಲ ಬಂದಿದೆ. ಸೊರಬ, ಸಾಗರ ಸೇರಿ ಶಿವಮೊಗ್ಗ ಜಿಲ್ಲೆಯಲ್ಲಿ ಇವರ ಸೇರ್ಪಡೆಯಿಂದ ಎಲ್ಲರೂ ಗೆಲ್ಲಲು ದೊಡ್ಡ ಶಕ್ತಿ ತುಂಬಿದಂತಾಗಿದೆ. ನಮ್ಮ ಸರ್ಕಾರ ಬಂದಾಗ ಅವರಿಗೂ ಸೂಕ್ತ ಸ್ಥಾನಮಾನ ಕೊಡಲು ತೀರ್ಮಾನಿಸಲಾಗಿದೆ.