ಬೆಂಗಳೂರು : ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದಿರುವ ಭ್ರಷ್ಟಾಚಾರ (Corruption) ಮತ್ತು ಅಸಮರ್ಪಕ ಆಡಳಿತದ ಕುರಿತು ಸರ್ಕಾರ, ಉನ್ನತ ಮಟ್ಟದ ತನಿಖೆ ನಡೆಸಿ ಭ್ರಷ್ಟಾಚಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿಯ ಡಾ.ಧನಂಜಯ ಸರ್ಜಿ ಆಗ್ರಹಿಸಿದರು.
ವಿಧಾನಪರಿಷತ್ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿದ ಡಾ. ಧನಂಜಯ ಸರ್ಜಿ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ರೂಪಿಸುವ ಮಹತ್ತರ ಜವಾಬ್ದಾರಿ ನಿರ್ವಹಿಸಬೇಕಾದ ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಏಕರೂಪದ ವೇಳಾಪಟ್ಟಿ ಅನುಸರಿಸುವಲ್ಲಿ ಲೋಪ, ವಿ.ವಿ.ಯ ಪ್ರಸಾರಾಂಗದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅವ್ಯವಹಾರ (Corruption) ಆಗಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ ಎಂದರು.
ವಿಶ್ವವಿದ್ಯಾಲಯದ ದೂರ ಶಿಕ್ಷಣ ಪ್ರವೇಶಾತಿ ಮತ್ತು ವ್ಯಾಸಂಗದ ಇನ್ನಿತರ ನಿರ್ವಹಣೆಗಳನ್ನು ಎಲ್.ಎಂ.ಎಸ್ ಮುಖಾಂತರ ನಡೆಸಲು ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯೊಂದಿಗೆ ಮಾಡಿಕೊಂಡಿರುವ ಒಪ್ಪಂದ, ದರ ನಿರ್ಣಯಗಳಲ್ಲಿನ ತಪ್ಪುಗಳಿಂದಾಗಿ ವಿಶ್ವವಿದ್ಯಾಲಯಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
– ಡಾ.ಧನಂಜಯ ಸರ್ಜಿ, ವಿಧಾನ ಪರಿಷತ್ ಸದಸ್ಯ
ಈ ಸಾಫ್ಟ್‌ವೇರ್ ಸಂಸ್ಥೆ ಈ ಹಿಂದೆ ಅಧ್ಯಯನ ಕೇಂದ್ರ ತೆರೆದು ವಿದ್ಯಾರ್ಥಿಗಳಿಂದ ಪಡೆಯಲಾಗಿದ್ದ ಶುಲ್ಕವನ್ನು ವಿವಿಗೆ ಪಾವತಿಸದೆ ಕೋಟ್ಯಂತರ ರೂಪಾಯಿ ಬಾಕಿ ಉಳಿಸಿಕೊಂಡಿದೆ. ವಿವಿಗೆ ನೀಡಿದ್ದ 30 ಲಕ್ಷ ರೂ. ಮೊತ್ತದ ಚೆಕ್ ಬೌನ್ಸ್ ಆಗಿ ಪ್ರಕರಣ ನ್ಯಾಯಾಲಯದಲ್ಲಿದೆ. ಮತ್ತೊಮ್ಮೆ ಅದೇ ಸಂಸ್ಥೆಯೊಂದಿಗೆ ವ್ಯವಹರಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದರಲ್ಲಿ ಭ್ರಷ್ಟಾಚಾರ ಆಗಿರುವುದು ಕಂಡುಬರುತ್ತಿದೆ. ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ » ಸಾಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಜಫ್ತಿ, ನ್ಯಾಯಾಲಯದ ಆವರಣಕ್ಕೆ ರವಾನೆ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200