ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ನವೆಂಬರ್ 2021
ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್’ಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಿ.ಎಸ್.ಅರುಣ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಮರುದಿನವೆ ನಾಮಪತ್ರ ಸಲ್ಲಿಕೆಯಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಇವತ್ತು ಡಿ.ಎಸ್.ಅರುಣ್ ನಾಮಪತ್ರ ಸಲ್ಲಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಅವರು ಸೂಚಕರಾಗಿ ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕಮಾರ್ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.
‘ಅತ್ಯಧಿಕ ಮತಗಳ ಅಂತರದ ಗೆಲುವು’
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್, ಪಕ್ಷದ ಹಿರಿಯರು ಅವಕಾಶ ಕೊಟ್ಟಿದ್ದಾರೆ. ಗೆದ್ದೆ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಶಿವಮೊಗ್ಗ ಸಂಸದರು, ಸಚಿವರ ಕೆಲಸಗಳು ನಮ್ಮ ಗೆಲುವಿಗೆ ಸಹಕಾರಿಯಾಗಲಿದೆ. ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ತಿಳಿಸಿದರು.
‘ನಮ್ಮ ಬಳಿ ಶೇ.50ಕ್ಕಿಂತಲೂ ಹೆಚ್ಚು ಮತಗಳಿವೆ’
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿದ್ದಾರೆ. ಇದು ಡಿ.ಎಸ್.ಅರುಣ್ ಅವರ ಗೆಲುವಿಗೆ ಸಹಕಾರಿಯಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ದಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತೇವೆ. ಶೇ.50ಕ್ಕಿಂತಲೂ ಹೆಚ್ಚಿನ ಮತಗಳು ಬಿಜೆಪಿ ಬಳಿ ಇದೆ. ನೂರಕ್ಕೆ ನೂರರಷ್ಟು ಅರುಣ್ ಅವರು ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಹುಟ್ಟುಹಬ್ಬದಂದೆ ನಾಮಪತ್ರ
ಇದಕ್ಕೂ ಮೊದಲು ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರಿಗೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಇವತ್ತು ಡಿ.ಎಸ್.ಅರುಣ್ ಅವರ ಹುಟ್ಟುಹಬ್ಬ. ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಪ್ರಮುಖರಾದ ಎಂ.ಬಿ.ಭಾನುಪ್ರಕಾಶ್, ಧರ್ಮಪ್ರಸಾದ್ ಸೇರಿದಂತೆ ಹಲವರು ಡಿ.ಎಸ್.ಅರುಣ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200