ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 MARCH 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
LOKSABHA ELECTION : ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗುತ್ತಿದೆ. ಬಿಜೆಪಿಯ ಬಿ.ವೈ.ರಾಘವೇಂದ್ರ, ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್ ಮತ್ತು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಕೆ.ಎಸ್.ಈಶ್ವರಪ್ಪ ಪ್ರಚಾರ ಕಾರ್ಯದಲ್ಲಿ ತೊಡಿಗಿಸಿಕೊಂಡಿದ್ದಾರೆ. ಯಾರೆಲ್ಲ ಎಲ್ಲೆಲ್ಲಿ ಪ್ರಚಾರ ನಡೆಸಿದರು? ಇದರ ಕಂಪ್ಲೀಟ್ ವಿವರ ಇಲ್ಲಿದೆ.
ಬಿ.ವೈ.ರಾಘವೇಂದ್ರ, ಬಿಜೆಪಿ ಅಭ್ಯರ್ಥಿ
ಶುಕ್ರವಾರ ಬೆಳಗ್ಗೆ ಶಿವಮೊಗ್ಗದ ವಿನೋಬನಗರ ಮನೆಯಲ್ಲಿ ಬಿ.ವೈ.ರಾಘವೇಂದ್ರ ಅವರು ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಭೇಟಿಯಾದರು. ಕೆಲವು ಹೊತ್ತು ಚರ್ಚೆಗಳು ನಡೆದವು. ಇದೆ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ತಮ್ಮ ವಿರುದ್ಧ ಟೀಕೆ ವೇಳೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದನ್ನು ಖಂಡಿಸಿದರು. ನಂತರ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರ ಮನೆಗೆ ತೆರಳಿ ಅಲ್ಲಿ ನಡೆದ ಗಣಪತಿ ಪೂಜೆಯಲ್ಲಿ ಭಾಗವಹಿಸಿದ್ದರು. ಶ್ರೀ ಕೊಲ್ಲೂರು ಮಹಾತ್ಮೆ ಯಕ್ಷಗಾನ ವೀಕ್ಷಿಸಿದರು. ಬೈಂದೂರು ಬಿಜೆಪಿಯ ನೂತನ ಪದಾಧಿಕಾರಿಗಳ ಘೋಷಣೆ ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದರು.
ಗೀತಾ ಶಿವರಾಜ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳುವ ಮಾರ್ಗ ಮಧ್ಯೆ ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್‌ಗೆ ಗೀತಾ ಶಿವರಾಜ್ ಕುಮಾರ್, ನಟ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿದ್ದ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಶುಕ್ರವಾರ ಬೈಂದೂರು ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ನಂತರ ತ್ರಾಸಿ ಗ್ರಾಮದ ಅಪ್ಪಣ್ಣಯ್ಯ ಸಭಾ ಭವನದಲ್ಲಿ ವಂಡ್ಸೆ ಮತ್ತು ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲಾಯಿತು. ಕೊಲ್ಲೂರು ಮೂಕಾಂಬಿಕಾ ದೇವಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೆ.ಎಸ್.ಈಶ್ವರಪ್ಪ, ಸ್ವತಂತ್ರ ಅಭ್ಯರ್ಥಿ
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಘೋಷಣೆ ಮಾಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಸಾಲು ಸಾಲು ಸಭೆಗಳನ್ನು ನಡೆಸಿದರು. ಮಲ್ಲೇಶ್ವರ ನಗರದಲ್ಲಿರುವ ತಮ್ಮ ಮನೆಯ ಆವರಣದಲ್ಲಿ ಬೆಂಬಲಿಗರ ಸಭೆ ನಡೆಸಿದರು. ತಾವು ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಕಾರಣವನ್ನು ಬೆಂಬಲಿಗರಿಗೆ ಮನದಟ್ಟು ಮಾಡಿಕೊಡುವ ಪ್ರಯತ್ನ ಮಾಡಿದರು. ಅಲ್ಲದೆ ಪ್ರಚಾರ ಕಾರ್ಯದ ಕುರಿತು ತಿಳಿಸಿದರು. ನಂತರ ಮಹಿಳೆಯರ ಜೊತೆಗೆ ಪ್ರತ್ಯೇಕ ಸಭೆ ನಡೆಸಿದರು. ಇದೇ ವೇಳೆ ಹಲವು ಪ್ರಮುಖರು ಈಶ್ವರಪ್ಪ ಅವರನ್ನು ಭೇಟಿಯಾದರು. ಅವರೊಂದಿಗೆ ಚರ್ಚೆ ನಡೆಸಿದರು.
ಇದನ್ನೂ ಓದಿ – ಮುಂದುವರೆದ ಟೆಂಪಲ್ ರನ್, ಇವತ್ತು ಸಿಗಂದೂರು, ಹುಂಚಕ್ಕೆ ಈಶ್ವರಪ್ಪ, ಭೇಟಿ ಕುರಿತು ಏನೆಲ್ಲ ಹೇಳಿದರು?