SHIVAMOGGA LIVE NEWS | SHIMOGA FM | 21 ಏಪ್ರಿಲ್ 2022
ದಿಂಗಾಲೇಶ್ವರ ಸ್ವಾಮೀಜಿ ಅವರು ನನ್ನ ಪರ ಮಾತಾಡಿದ್ದಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಆದರೆ ಕಮಿಷನ್ ಬಗ್ಗೆ ದಿಂಗಾಲೇಶ್ವರ ಸ್ವಾಮೀಜಿ ಆರೋಪಿಸುವ ಬದಲು ದಾಖಲೆಗಳನ್ನು ನೀಡಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಯಾವುದೇ ಇಲಾಖೆಗೆ ಕಮಿಷನ್ ಕೊಟ್ಟಿದ್ದರೆ ದಾಖಲೆ ನೀಡಿ. ಬಾಯಿ ಬಂದಂಗೆ ಯಾರೂ ಮಾತನಾಡಬಾರದು ಎಂದು ತಿಳಿಸಿದರು.
ಕೆಂಪಣ್ಣ ವಿರುದ್ಧ ಆಕ್ರೋಶ
ಕಮಿಷನ್ ಪಡೆದಿರುವುದಕ್ಕೆ ಯಾರೂ ರಶೀದಿ ಕೊಡಲ್ಲ. ಆದರೆ ಯಾರಿಗೆ ಕಮಿಷನ್ ಕೊಟ್ಟಿದ್ದಾರೆಂದು ಬಹಿರಂಗಪಡಿಸಿ. ಕೆಂಪಣ್ಣ ಕಾಂಗ್ರೆಸ್ ಏಜೆಂಟ್ ರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧವು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲೂ ಇರಲ್ಲ
ಕಾಂಗ್ರೆಸ್ ಪಕ್ಷ ಬೆಳಗ್ಗೆ ಎದ್ದರೆ ಮುಸ್ಲಿಮರನ್ನು ಮೆಚ್ಚಿಸುವ ಕೆಲಸ ಮಾಡುತ್ತಿದೆ. ಇವರಿಗೆ ಕಮಿಷನ್ ಬಗ್ಗೆ ಮಾತನಾಡುವುದೇ ಕೆಲಸವಾಗಿಬಿಟ್ಟಿದೆ. ಮುಂದೆ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲೂ ಇರಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ. ವೀರಶೈವ ಲಿಂಗಾಯತರನ್ನು ಒಡೆಯುವ ಕೆಲಸ ಮಾಡಿದ್ದರು. ಹೀಗಾಗಿ ರಾಜ್ಯದ ಜನರು ಅವರಿಗೆ ಅಧಿಕಾರವನ್ನು ಕೊಡಲಿಲ್ಲ. ಕಾಂಗ್ರೆಸ್ ಈಗಲಾದರೂ ಜನಪರ ಕೆಲಸ ಮಾಡಲಿ ಎಂದರು.
ಸುದ್ದಿಗೋಷ್ಟಿಯಲ್ಲಿ ಶಾಸಕ ಹರತಾಳು ಹಾಲಪ್ಪ,ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್,ಮೇಯರ್ ಸುನೀತಾ ಅಣ್ಣಪ್ಪ,ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್ ಚನ್ನಬಸಪ್ಪ ಇದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200